ಮುಂಬೈ: ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಹಾಕಲಾಗಿದ್ದು, ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಕತ್ರಿನಾ ಮತ್ತು ವಿಕ್ಕಿ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದಂದು ಮಾಲ್ಡೀವ್ಸ್ನಲ್ಲಿ ಸಮಯ ಕಳೆದಿದ್ದು, ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಕುರಿತು ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ಬೆದರಿಕೆಗಳು ಏನೆಂದು ತಿಳಿದುಬಂದಿಲ್ಲ. ಈ ಕುರಿತು ವಿಕ್ಕಿ ಕೌಶಲ್ ಅವರ ದೂರಿನ ಮೇರೆಗೆ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ.
ಅಪರಿಚಿತ ವ್ಯಕ್ತಿಯೊಬ್ಬ ಇನ್ಸ್ಟಾಗ್ರಾಮ್ನಲ್ಲಿ ತನ್ನ ಹೆಂಡತಿಯನ್ನು ಹಿಂಬಾಲಿಸುತ್ತಿದ್ದು, ಅವಳಿಗೆ ಬೆದರಿಕೆ ಹಾಕುತ್ತಿದ್ದಾನೆ ಬೆದರಿಕೆ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: “ನೀನು ಬಗೆಹರಿಯದ ಹಾಡು…’; ಗಾಳಿಪಟ-2 ಚಿತ್ರ ಮತ್ತೊಂದು ಹಾಡು ಬಂತು
ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೂ ಪತ್ರದ ರೂಪದಲ್ಲಿ ಬೆದರಿಕೆಗಳು ಬಂದಿದ್ದವು. ಘಟನೆಯ ನಂತರ ಸಲ್ಮಾನ್ ಮತ್ತು ಅವರ ಕುಟುಂಬಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ವ್ಯಕ್ತಿಗಳಿಂದ ಹಣ ಸುಲಿಗೆ ಮಾಡಲು ಈ ಕೃತ್ಯವನ್ನು ಎಸಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.