Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿ ಹಲವರ ಅರ್ಜಿ ವಜಾ

10:35 PM Dec 19, 2020 | sudhir |

ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿ ಹಲವರ ವಿರುದ್ಧ ಜಾರಿ ನಿರ್ದೇಶನಾಲಯನ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿರುವ ಹೈಕೋರ್ಟ್‌, ಈ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.

Advertisement

ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಕಟ್ಟಾ ಸುಬ್ರಮಣ್ಯ ನಾಯ್ಡು, ಅವರ ಪತ್ನಿ ಸೌಭಾಗ್ಯ ಸೇರಿ 20ಕ್ಕೂ ಅಧಿಕ ಮಂದಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಅಲ್ಲದೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಲು ನ್ಯಾಯಪೀಠ ಸ್ಪಷ್ಟವಾಗಿ ನಿರಾಕರಿಸಿದೆ. ಜೊತೆಗೆ ಪಿಎಂಎಎಲ್‌ತಿದ್ದುಪಡಿಗೆ ಮುನ್ನವೇ ತಮ್ಮ ಆಸ್ತಿಯನ್ನು ತಾತ್ಕಾಲಿಕವಾಗಿ ಜಫ್ತಿಗೊಳಿಸಲಾಗಿತ್ತು, ಅದು ಕಾನೂನು ಬದ್ಧವಲ್ಲ ಎಂಬ ಅರ್ಜಿದಾರರ ವಾದವನ್ನೂ ಸಹ ನ್ಯಾಯಾಲಯ ತಳ್ಳಿಹಾಕಿ, ಆಸ್ತಿ ಜಫ್ತಿ ಕಾನೂನು ಬದ್ಧವಾಗಿದೆ ಎಂದು ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ:ವೈಟ್‌ಹೌಸ್‌ ಮಾಧ್ಯಮ ಸಹ ಕಾರ್ಯದರ್ಶಿಯಾಗಿ ವೇದಾಂತ್‌ ಪಟೇಲ್‌ ಆಯ್ಕೆ

ಕೆಐಎಡಿಬಿ ಹಗರಣದ ಸಂಬಂಧ 2010 ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅದನ್ನು ಆಧರಿಸಿ 2014 ರಲ್ಲಿ ಜಾರಿ ನಿರ್ದೇಶನಾಲಯ ಆರೋಪಿತರ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಅದನ್ನು ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರು ಪ್ರಶ್ನಿಸಿದ್ದರು. ನ್ಯಾಯಾಲಯ ಅದನ್ನು ತಳ್ಳಿಹಾಕಿತ್ತು. ಹಾಗಾಗಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿ ಹಲವರು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ತಿದ್ದುಪಡಿಗೆ ಮೊದಲೇ ಇಡಿ ಆಸ್ತಿ ಜಪ್ತಿ ಮಾಡಿದ್ದು, ಅದು ಕಾನೂನು ಬಾಹಿರ ಕ್ರಮವಾಗಿದೆ, ಹಾಗಾಗಿ ಇಡಿ ಜಫ್ತಿ ಆದೇಶವನ್ನು ರದ್ದುಗೊಳಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next