ಕಾಪು : ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಮುಸ್ಲಿಂ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕಾಪುವಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ ಬೆಂಬಲದೊಂದಿಗೆ ನಡೆಯುತ್ತಿರುವ ಬಂದ್ ಗೆ ಬೆಂಬಲ ಸೂಚಿಸಿ
ಮುಸ್ಲಿಂ ಸಮುಯದಾಯದವರು ಗುರುವಾರ ಬೆಳಗ್ಗಿನಿಂದಲೇ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಾಪು ಪೇಟೆ, ಉಚ್ಚಿಲ, ಬೆಳಪು, ಮಲ್ಲಾರು ಸಹಿತ ವಿವಿಧೆಡೆ ಅಂಗಡಿಗಳನ್ನು ಮುಚ್ಚಿ, ವ್ಯವಹಾರ ಸ್ಥಗಿತಗೊಳಿಸಲಾಗಿದ್ದು, ಉಳಿದೆಡೆಯೂ ಇದೇ ರೀತಿಯ ಪ್ರತಿಭಟನೆ ವ್ಯಕ್ತವಾಗುವ ನಿರೀಕ್ಷೆಗಳಿವೆ.
ಹೈಕೋರ್ಟ್ ತೀರ್ಪನ್ನು ಧಿಕ್ಕರಿಸಿ, ಹಿಜಾಬ್ ಬೇಕೆಂಬ ಬೇಡಿಕೆಯನ್ನು ಮುಂದಿರಿಸಿ ನಡೆಯುತ್ತಿರುವ ಈ ಪ್ರತಿಭಟನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ : ಕ್ಯಾನ್ಸರ್ ರೋಗಿಯನ್ನೂ ಬಿಡದ ಖದೀಮರು; ವೈದ್ಯರ ಸೋಗಿನಲ್ಲಿ ವಂಚನೆ