Advertisement

Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ

09:14 PM Dec 16, 2024 | Team Udayavani |

ಕಾಪು: ಸಾಮಾಜಿಕ, ಧಾರ್ಮಿಕ ಮತ್ತು ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ (83) ಸೋಮವಾರ (ಡಿ.16) ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರ ಅಗಲಿದ್ದಾರೆ.

Advertisement

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಬೆಳಪು ಗ್ರಾಮ ಪಂಚಾಯತ್, ಬೆಳಪು ವ್ಯವಸಾಯ ಸಹಕಾರಿ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಉಡುಪಿ ಎಪಿಎಂಸಿ, ಪಣಿಯೂರು ಶ್ರೀ ದುರ್ಗಾ ದೇವಿ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಗ್ರಾಮೀಣ ಪ್ರದೇಶವಾದ ಪಣಿಯೂರು ಪೇಟೆಯಲ್ಲಿ ಸೂಪರ್ ಮಾರ್ಕೆಟ್ ಮಾದರಿಯ ಅಂಗಡಿ ನಡೆಸುತ್ತಿದ್ದ ಅವರು ವಿವಿಧ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಸಹಿತ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ, ಮದುವೆ, ಶವ ಸಂಸ್ಕಾರ ಮೊದಲಾದ ಸಂಪ್ರದಾಯ ಬದ್ಧ ಆಚರಣೆಗಳ ವಿಧಿ ವಿಧಾನಗಳ ಪೂರೈಸುವಲ್ಲಿಯೂ ಪ್ರಸಿದ್ಧರಾಗಿದ್ದರು. ಬೆಳಪು, ಪಣಿಯೂರು, ಎಲ್ಲೂರು ಪರಿಸರದಲ್ಲಿ ನಾಗರ ಹಾವು ಬಂತೆಂದಂರೆ ಅದನ್ನು ಹಿಡಿದು ಕಾಡಿಗೆ ಕೊಂಡೊಯ್ದು ಬಿಡುವುದರಲ್ಲಿಯೂ ನಿಪುಣರಾಗಿದ್ದರು.

ಗಣ್ಯರಿಂದ ಸಂತಾಪ :
ಬಿ. ವಿಶ್ವನಾಥ್ ರಾವ್ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬೆಳಪು ಗ್ರಾ.ಪಂ., ಬೆಳಪು ಸಿಎ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ, ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ನಡಿಮನೆ ದೇವರಾಜ್ ರಾವ್, ಎಲ್ಲೂರು ದೇವಸ್ಥಾನದ ಆಡಳಿತ ಮೊಕ್ತೇಸರ ಅರುಣಾಕರ ಶೆಟ್ಟಿ ಕಳತ್ತೂರು ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next