ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಮಂಗಳವಾರ ತಮ್ಮ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳೊಂದಿಗೆ ಕೂಡಿಕೊಂಡು ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಸಿದರು.
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಪ್ರಾರ್ಥನೆಗೈದು ಪಾದಯಾತ್ರೆಯ ಮೂಲಕವಾಗಿ ತಾಲೂಕು ಮಿನಿವಿಧಾನ ಸೌಧಕ್ಕೆ ಬಂದು ಚುನಾವಣಾಧಿಕಾರಿ ಪಿ.ಕೆ. ಬಿನೋಯ್ ನಂಬಿಯಾರ್ ಮತ್ತು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರ ಮೂಲಕವಾಗಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕಾಪು ದಿವಾಕರ ಶೆಟ್ಟಿ, ನವೀನ್ ಚಂದ್ರ ಸುವರ್ಣ, ಸಂತೋಷ್ ಕುಲಾಲ್, ವಿಲ್ಸನ್ ರೋಡ್ರಿಗಸ್ ಜತೆಗಿದ್ದರು.
ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಉಡುಪಿ ಶ್ರೀ ಕೃಷ್ಣ ಮಠ, ಉಡುಪಿ ಬಿಷಪ್ ಹೌಸ್, ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಪೊಲಿಪು ಜಾಮಿಯಾ ಮಸೀದಿ, ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.
ಪಾದಯಾತ್ರೆಯಲ್ಲಿ ವಿಧಾನ ಪರಿಷತ್ ನ ಮಾಜಿ ಸಚೇತಕ ಐವನ್ ಡಿ. ಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ದಕ್ಷಿಣ ವಿಭಾಗದ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉತ್ತರ ವಿಭಾಗದ ಅಧ್ಯಕ್ಷ ಸಂತೋಷ್ ಕುಲಾಲ್, ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಕುಂದಾಪುರ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಚುನಾವಣಾ ಉಸ್ತುವಾರಿಗಳಾದ ಕಳ್ಳಿಗೆ ತಾರನಾಥ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಮುಖಂಡರಾದ ರಾಕೇಶ್ ಮಲ್ಲಿ, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ನವೀನ್ ಚಂದ್ರ ಶೆಟ್ಟಿ, ಹರೀಶ್ ಕಿಣಿ, ಗೀತಾ ವಾಗ್ಲೆ, ಜಿತೇಂದ್ರ ಪುರ್ಟಾಡೋ, ಇಸ್ಮಾಯಿಲ್ ಆತ್ರಾಡಿ, ವೆರೋನಿಕಾ ಕರ್ನೇಲಿಯೋ, ಶಿವಾಜಿ ಸುವರ್ಣ, ದೀಪಕ್ ಕೋಟ್ಯಾನ್, ರಾಜೇಶ್ ರಾವ್ ಪಾಂಗಾಳ, ವಿನಯ ಬಲ್ಲಾಳ್, ಪ್ರಶಾಂತ ಜತ್ತನ್ನ, ಸರಸು ಬಂಗೇರ, ಸುನೀಲ್ ಬಂಗೇರ, ವಿಕ್ರಂ ಕಾಪು, ಶರ್ಪುದ್ದೀನ್ ಶೇಖ್, ಶೇಖರ ಹೆಜಮಾಡಿ, ರಮೀಜ್ ಹುಸೇನ್, ಹರೀಶ್ ನಾಯಕ್, ಶಾಂತಲತಾ ಶೆಟ್ಟಿ, ಮಹಮ್ಮದ್ ಸಾಧಿಕ್ ಮೊದಲಾದವರು ಪಾಲ್ಗೊಂಡಿದ್ದರು.