ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಸಮಿತಿ ಕಾರ್ಯಾಲಯ, ಮಾಧ್ಯಮ ವಿಭಾಗದ ಉದ್ಘಾಟನಾ ಸಮಾರಂಭವು ಮಂಗಳವಾರ (ಡಿ. 3) ರಂದು ನಡೆಯಿತು.
ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ, ಎಂಡಿಎನ್‌ಎಲ್ ಆಡಳಿತ ನಿರ್ದೇಶಕ ಮತ್ತು ಕಾರ್ಯ ನಿರ್ವಹಣಾಧಿಕಾರಿ ವಿನೋದ್ ಕುಮಾರ್ ಉದ್ಘಾಟಿಸಿದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ವೇ. ಮೂ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಬಂಜಾರ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯಾಧ್ಯಕ್ಷರಾದ ಭಗವಾನ್ ದಾಸ್ ಶೆಟ್ಟಿಗಾರ್, ಜಯ ಸಿ. ಕೋಟ್ಯಾನ್, ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಗಣ್ಯರ ಉಪಸ್ಥಿತಿ: ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜ್ಮಾಡಿ, ಗೌರವ ಸಲಹೆಗಾರರಾದ ನಡಿಕೆರೆ ರತ್ನಾಕರ ಶೆಟ್ಟಿ, ನಿರ್ಮಲ್ ಕುಮಾರ್ ಹೆಗ್ಡೆ, ಕೃಷ್ಣಪ್ರಸಾದ್ ಅಡ್ಯಂತಾಯ, ಸಂದೀಪ್ ಕುಮಾರ್ ಮಂಜ, ಸಮಿತಿ ಪ್ರಮುಖರಾದ ಪ್ರಭಾಕರ ಪೂಜಾರಿ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಶೇಖರ್ ಸಾಲ್ಯಾನ್, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ಪ್ರಸನ್ನ ಆಚಾರ್ಯ, ಮೋಹನ್ ಬಂಗೇರ, ಜಯರಾಮ ಆಚಾರ್ಯ, ವಿಶ್ವಕರ್ಮ ಸಮಾಜದ ಪ್ರಮುಖ ಗಣೇಶ್ ಆಚಾರ್ಯ ಕಾಪು, ಅಚ್ಯುತ ಆಚಾರ್ಯ ಉಡುಪಿ, ಗಂಗಾಧರ ಆಚಾರ್ಯ ದಿಂಡಿಬೆಟ್ಟು, ಅರವಿಂದ ಆಚಾರ್ಯ ಬೆಳುವಾಯಿ, ರೂಪೇಶ್ ಆಚಾರ್ಯ, ಸಂದೀಪ್ ಪುರೋಹಿತ್ ಮೊದಲಾದವರು ಪಾಲ್ಗೊಂಡಿದ್ದರು.