ಕಾಪು : ಪ್ರಥಮ ಹಂತದಲ್ಲಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ದಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆ ಜಾತ್ರೆಯ ಪ್ರಯುಕ್ತ ಮಾ. 22 ರಂದು ಶಿಲಾ ಸೇವೆ ಸಮರ್ಪಣೆಗೆ ಚಾಲನೆ ನೀಡಲಾಯಿತು.
ಕ್ಷೇತ್ರದ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ ಶಿಲಾ ಸೇವೆ ಸಮರ್ಪಣಾಪೂರ್ವಕ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ವೇ.ಮೂ. ಅನಂತ ಪದ್ಮನಾಭ ಅಸ್ರಣ್ಣ ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್ ಅವರು ಜೊತೆಗೂಡಿ ಚಾಲನೆ ನೀಡಿದರು. ಧಾರ್ಮಿಕ ಮುಖಂಡ ಸುವರ್ಣ ಬಾಬ ಪೊವಾಯಿ ಶುಭ ಹಾರೈಸಿದರು.
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾದವ ಆರ್. ಪಾಲನ್, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಗಂಗಾಧರ ಸುವರ್ಣ, ಮನೋಹರ್ ಶೆಟ್ಟಿ ಕಾಪು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ್ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ., ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಬಾಬು ಮಲ್ಲಾರು, ಮಾರಿಗುಡಿಯ ಪಾತ್ರಿಗಳಾದ ಗುರು ಮೂರ್ತಿ, ಸಚಿನ್ ಪಾತ್ರಿ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಸಮುದಾಯಗಳ ಮುಖಂಡರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ಸಂಘ – ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಬಡ ಯುವತಿಯ ಮದುವೆಗೆ ನೆರವಾದ ಮಂಗಳಮುಖಿಯರು
ಕಾಪು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.