Advertisement

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

12:05 PM Jun 25, 2024 | Team Udayavani |

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಮಂಗಳವಾರ ಚಾಲನೆ ನೀಡಲಾಯಿತು.

Advertisement

ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ಸ್ವರ್ಣ ಗೌರಿ ಪೂಜೆಯೊಂದಿಗೆ ಸ್ವರ್ಣ ಸಮರ್ಪಣೆಗೆ ಚಾಲನೆ ದೊರಕಿತು.

ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ತಹಶೀಲ್ದಾರ್ ಡಾ. ಪ್ರತಿಭಾ ಆರ್. ಸಹಿತ ನೂರಾರು ಮಂದಿ ಗಣ್ಯರು, ಮಹಿಳೆಯರು ಸ್ವರ್ಣ ಗೌರಿ ಪೂಜೆಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

 

Advertisement

ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು‌. ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಂಬಯಿ ವಿ.ಕೆ. ಗ್ರೂಪ್ ಆಫ್ ಕಂಪನೀಸ್ ಆಡಳಿತ ನಿರ್ದೇಶಕ ಕೆ. ಎಂ‌. ಶೆಟ್ಟಿ ಸ್ವರ್ಣ ಗದ್ದುಗೆಯ ಮಾದರಿ ಅನಾವರಣಗೊಳಿಸಿದರು.

ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಮಿತಿ ಗೌರವಾಧ್ಯಕ್ಷರಾದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಗಣ್ಯರಾದ ಎಂ. ಆರ್. ಜಿ. ಗ್ರೂಫ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ, ಅದಾನಿ ಸಮೂಹ‌ ಸಂಸ್ಥೆಯ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ನ ಆಡಳಿತ ನಿರ್ದೇಶಕ ಎಂ. ಸುಧಾಕರ್ ಹೆಗ್ಡೆ ಮುಂಬಯಿ, ಈಸ್ಟ್ ವೆಲ್ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಪ್ರಭಾಕರ ಶೆಟ್ಟಿ, ಮುಂಬಯಿ ಹೈಕೋರ್ಟ್ ನ್ಯಾಯವಾದಿ ಮಹೇಶ್ ಕೋಟ್ಯಾನ್, ಮುಂಬಯಿಯ ಉದ್ಯಮಿ ಮಾನವ್ ಶಂಕರ್ ಜೋಷಿ, ಭಾರತ್ ಕೋ. ಆಪರೇಟಿವ್ ಬ್ಯಾಂಕ್ ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಕೃಷ್ಣ ವೈ. ಶೆಟ್ಟಿ ಮುಂಬಯಿ, ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಡಾ. ಶಿವಾನಂದ್ ಶೆಟ್ಟಿ, ಒಮನ್‌ ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ ಮಸ್ಕತ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಪ್ರಧಾನ ಕಾರ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕೋಶಾಧಿಕಾರಿ ಎರ್ಮಾಳು ಚಂದ್ರಹಾಸ ಶೆಟ್ಟಿ ಪುಣೆ, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ರಾಜಶೇಖರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಕೆ. ರವಿಕಿರಣ್, ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ವಿವಿಧ ಸಮಿತಿಗಳ ಪದಾಧಿಕಾರಿಗಳು, ದೇಶ – ವಿದೇಶಗಳ ಭಕ್ತರು, ಕಾಪು ಸಾವಿರ ಸೀಮೆಯ ಭಗವದ್ಭಕ್ತರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇಂದಿನಿಂದ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಅವಕಾಶ :
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸುಮಾರು 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿಯೊಂದಿಗೆ ನೂತನ ಸ್ವರ್ಣ ಗದ್ದುಗೆ ನಿರ್ಮಾಣಗೊಳ್ಳಲಿದೆ. ಇದಕ್ಕೆ ಪೂರಕವಾಗಿ ಸ್ವರ್ಣ ಸಮರ್ಪಣೆಗೆ ಚಾಲನೆ ನೀಡಲಾಯಿತು. ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 243 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅವಕಾಶವಿದ್ದು ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ ಎಂದು ಸ್ವರ್ಣ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

2025 ಮಾರ್ಚ್ 2 ರಂದು ಸ್ವರ್ಣ ಗದ್ದುಗೆ ಪ್ರತಿಷ್ಠೆ :
ಸರಕಾರದ ಯಾವುದೇ ಅನುದಾನವಿಲ್ಲದೇ ಕೇವಲ‌ ಭಕ್ತರ ದೇಣಿಗೆಯೊಂದಿಗೆ ಮಾರಿಯಮ್ಮನ‌ ಅನುಗ್ರಹದಿಂದ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಮಗ್ರ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದೆ. ಪ್ರಥಮ ಹಂತದಲ್ಲಿ ಶಿಲಾಮಯ ಗರ್ಭಗುಡಿ, ಸುತ್ತುಪೌಳಿ ನಿರ್ಮಾ ಸಹಿತ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು ಮುಂದೆ‌ ರಾಜಗೋಪುರ, ಭೋಜನ ಶಾಲೆ, ಶೌಚಾಲಯ ನಿರ್ಮಾಣ ಸಹಿತ ಮೂಲ ಸೌಕರ್ಯಗಳ ಜೋಡಣೆಗೆ ಚಾಲನೆ ನೀಡಲಾಗಿದೆ. ಇಂದು ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದ್ದು 2025 ಮಾರ್ಚ್ 2 ರಂದು ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸ್ವರ್ಣ ಗದ್ದುಗೆ ಪ್ರತಿಷ್ಠೆ ನಡೆಯಲಿದೆ ಎಂದರು.

ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

Advertisement

Udayavani is now on Telegram. Click here to join our channel and stay updated with the latest news.

Next