Advertisement

ಡಿವೈಡರ್ ಹಾರಿ ಬಂದು ಬೈಕ್ ಗೆ ಢಿಕ್ಕಿ ಹೊಡೆದ ಕಾರು: ಬೈಕ್ ಸವಾರ ಸಾವು

09:01 AM Mar 11, 2020 | keerthan |

ಕಾಪು: ಇನ್ನೋವಾ ಕಾರೊಂದು ಡಿವೈಡರ್ ಹಾರಿಕೊಂಡು ಬಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

Advertisement

ಬೈಕ್ ಸವಾರ ಸುಧಾಕರ್ (50) ಸಾವಿಗೀಡಾಗಿದ್ದಾರೆ.

ಕಾಪುವಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿವೈಡರ್ ಮೇಲಿನಿಂದ ಬಂದು ಮತ್ತೊಂದು ಬದಿಯ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next