Advertisement
ಮಂಗಳವಾರ ಕಾಪು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಆಂಧಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ನವದೆಹಲಿ, ಪಶ್ಚಿಮ ಬಂಗಾಳ ಸಹಿತ ವಿವಿಧ ರಾಜ್ಯಗಳ 300ಕ್ಕೂ ಅಧಿಕ ಮಂದಿ ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧಾಳುಗಳು ಮತ್ತು ಅವರೊಂದಿಗೆ ಬರುವ ಪೋಷಕರಿಗೆ 2 ದಿನದ ಉಚಿತ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.
Related Articles
Advertisement
ಕಾಪುವಿನ ಪ್ರಥಮ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆ : ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಸಂಸ್ಥೆಯು ಕಳೆದ 16 ವರ್ಷಗಳಿಂದ ಕಾಪುವಿನಲ್ಲಿ ವರ್ಷಂಪ್ರತಿ ಅಂತರ್ ಜಿಲ್ಲೆ ಮತ್ತು ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸಿಕೊಂಡು ಬಂದಿದ್ದು ಈವರೆಗೆ ಸುಮಾರು 2,500ಕ್ಕೂ ಮಿಕ್ಕ ಚೆಸ್ ಪಟುಗಳು ಬಹುಮಾನ ಗಳಿಸಿದ್ದಾರೆ. ಈ ಬಾರಿ ಪ್ರಥಮ ಬಾರಿಗೆ ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ರಾಷ್ಟ್ರ ಮಟ್ಟದ ಆಟಗಾರರನ್ನು ಕಾಪುವಿಗೆ ಪರಿಚಯಿಸುವ ಪ್ರಯತ್ನ ನಡೆಯುತ್ತಿದೆ ಎಂದರು.
ಕಾಪು ಆಸುಪಾಸಿನ ಮಕ್ಕಳಿಗೆ ಅನುಕೂಲವಾಗುವಂತೆ ಪ್ರತೀ ಬುಧವಾರ ಸಂಜೆ 6 ಗಂಟೆಗೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಚೆಸ್ ತರಬೇತಿ ತರಗತಿಯನ್ನು ನಡೆಸುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದಾಗಿದೆ ಎಂದರು.
ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇದರ ಅಧ್ಯಕ್ಷ ಉಮಾನಾಥ್ ಕಾಪು, ನಿರ್ದೇಶಕಿ ಸೌಂದರ್ಯ ಯು.ಕೆ., ಮುಖ್ಯ ಸಲಹೆಗಾರ ಲಕ್ಷ್ಮೀನಾರಾಯಣ ಆಚಾರ್ಯ ಉಡುಪಿ, ಸಲಹೆಗಾರ ನಾಗೇಶ್ ಕಾರಂತ್ ಕಾಪು, ಪಾಂಗಾಳ ಆಸರೆ ಸಂಸ್ಥೆಯ ಸ್ಥಾಪಕ ಪೆನ್ವೆಲ್ ಸೋನ್ , ಲೋಕೇಶ್ ಕೊಡ್ಮಾಣ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.