ಉಡುಪಿ: ಕಟಪಾಡಿ ಏಣಗುಡ್ಡೆಯ ರಾ.ಹೆ. 66ರ ಬಳಿ “ಕೌಸ್ತುಭ ರೆಸಿಡೆನ್ಸಿ’ ಹೊಟೇಲ್ ಮತ್ತು ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಜ. 29ರ ಬೆಳಗ್ಗೆ 10ಕ್ಕೆ ನಡೆಯಲಿದೆ.
ಮಡಗಾಂವ್, ಉಡುಪಿ, ಮಂಗಳೂರು ನಗರಗಳಲ್ಲಿ ವಿವೇಕ್ ಎಸೆನ್ಸ್‌ಮಾರ್ಟ್ ವಾಣಿಜ್ಯ ಸಂಸ್ಥೆಗಳನ್ನು ನಡೆಸುತ್ತಿರುವ ಉಡುಪಿ ನಗರಸಭೆಯ ಸದಸ್ಯರು ಹಾಗೂ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಶ್ರೀಕೃಷ್ಣ ರಾವ್ ಕೊಡಂಚ ಅವರ ಪ್ರಾಯೋಜಕತ್ವದಲ್ಲಿ ರೆಸಿಡೆನ್ಸಿ ತೆರೆಯಲಿದೆ.
ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕಟಪಾಡಿ ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಆಚಾರ್, ತಮಿಳುನಾಡು ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಎ. ರಾಮದಾಸ ರಾವ್, ತಂತ್ರಿ ಕುಟುಂಬದ ಮುಖ್ಯಸ್ಥ ಪಿ. ರಾಮದಾಸ ತಂತ್ರಿ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.
ಈ ಹೋಟೆಲ್ ಸಂಕೀರ್ಣದಲ್ಲಿ ಫ್ಯಾಮಿಲಿ ರೆಸ್ಟೋರೆಂಟ್, 26 ಎಸಿ ಮತ್ತು ನಾನ್ ಎಸಿ ಕೊಠಡಿಗಳು, ಪಾರ್ಟಿ ಹಾಲ್, ವಾಣಿಜ್ಯ ಮಳಿಗೆಗಳಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
Related Articles
ಇದನ್ನೂ ಓದಿ: ರಾಷ್ಟ್ರಪತಿ ಭವನದ ‘ಮೊಘಲ್ ಗಾರ್ಡನ್ ‘ ಇನ್ನು ‘ಅಮೃತ್ ಉದ್ಯಾನ್’ ಆಗಿ ಮರುನಾಮಕರಣ