Advertisement

ಕಾವಾಡಿಗರಹಟ್ಟಿ ಕಲುಷಿತ ನೀರಿನ ಪ್ರಕರಣ; ಸಾವಿನ ಸಂಖ್ಯೆ ಐದಕ್ಕೆ ಏರಿಕೆ

12:35 PM Aug 04, 2023 | Team Udayavani |

ಚಿತ್ರದುರ್ಗ: ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರುದ್ರಪ್ಪ(50) ಹಾಗೂ ಪಾರ್ವತಮ್ಮ (75) ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.

Advertisement

ಆ.1 ರಿಂದ ಈವರೆಗೆ ಐವರು ಮೃತಪಟ್ಟಿದ್ದು, ಶುಕ್ರವಾರವೇ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಾಲ್ಕನೇ ದಿನವೂ ಮೂವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಾರ್ಶ್ವವಾಯು ಪೀಡಿತರಾಗಿದ್ದ ಪಾರ್ವತಮ್ಮ ನೀರು ಕುಡಿದು ಅಸ್ವಸ್ಥರಾಗಿದ್ದರು. ಇವರಿಗೆ ಗುರುವಾರ ವಾಂತಿ ಭೇದಿ ಕಾಣಿಸಿಕೊಂಡು ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕುಟುಂಬದ ಎಲ್ಲ ಹತ್ತು ಸದಸ್ಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:ಪ್ರಚೋದನಾಕಾರಿ ಭಾಷಣ: ಶರಣ್ ಪಂಪ್ ವೆಲ್ ಸೇರಿ ಮೂವರ ವಿರುದ್ಧ ಎಫ್ಐಆರ್

ಕವಾಡಿಗರಹಟ್ಟಿಯ ಮಂಜುಳಾ, ರಘು ಆ.1ರಂದು ಹಾಗೂ ವಡ್ಡರ ಸಿದ್ಧವ್ವನಹಳ್ಳಿಯ ಪ್ರವೀಣ್ ಆ.2ರಂದು ಮೃತಪಟ್ಟಿದ್ದರು. ಶುಕ್ರವಾರ ನಸುಕಿನಲ್ಲಿ ರುದ್ರಪ್ಪ ಕೊನೆಯುಸಿರೆಳೆದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next