Advertisement

Kaveri Aarathi: ಗಂಗಾ ಆರತಿ ಅಧ್ಯಯನಕ್ಕೆ ಮತ್ತೊಮ್ಮೆ ನಿಯೋಗ ಕಳಿಸುವುದೇಕೆ?: ಆರ್‌.ಅಶೋಕ್‌

11:05 PM Sep 23, 2024 | Team Udayavani |

ಬೆಂಗಳೂರು:  ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್‌.ಚಲುವರಾಯ ಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ ಬಳಿಕ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಏತಕ್ಕೆ? ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.

Advertisement

ಸರಕಾರಕ್ಕೆ ಹಿಂದೂಗಳ ಆಚಾರ-ವಿಚಾರ ಬಗ್ಗೆ ದಿಢೀರ್‌ ಆಸಕ್ತಿ:
ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು ಮಸ್ತಿ ಮಾಡಲು ಹೋಗಿದ್ದಾ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ. ಅಯೋಧ್ಯೆ ಶ್ರೀ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷ ಹಳೆ  ಪ್ರಕರಣಗಳ ಮತ್ತೆ ಓಪನ್ ಮಾಡಿಸಿ ಕರಸೇವಕರ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯ ಪೊಲೀಸ್ ವ್ಯಾನ್ ಗೂ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ ವಿಚಾರದ ಬಗ್ಗೆ, ಸಂಪ್ರದಾಯ ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ.

ತಾಯಿ ಕಾವೇರಿ ಮೆಚ್ಚುತ್ತಾಳಾ?
ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ ಗಳನ್ನ ಒದ್ದು ಒಳಗೆ ಹಾಕಿ, ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್ ಗಳ ಒದ್ದು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್ ಗಳನ್ನು ಜೈಲಿಗೆ ಕಳಿಸಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ? ಎಂದು ವಿಪಕ್ಷ ನಾಯಕ ಅಶೋಕ್‌ ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next