Advertisement
ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಬಿಟ್ಟ ರಾಜ್ಯ ಸರ್ಕಾರ ಮತ್ತು ಸಚಿವರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಲು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Related Articles
Advertisement
ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ಕೆ.ಎಸ್. ನಂಜುಂಡೇಗೌಡರ ನೇತೃತ್ವದಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಂಡ್ಯ ಶೈಲಿಯ ಚಡ್ಡಿ ಧರಿಸಿ ರೈತರು ಭೀದಿಗಿಳಿದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿಯವರೆಗೂ ಚಡ್ಡಿ ಧರಿಸಿದ ರೈತರು ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯ ಮಾಡಿದರು.