Advertisement

ಕಾವೇರಿ ತೀರ್ಥೋದ್ಭವ: ಬೆಳಿಗ್ಗೆ 7.05ಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಜೀವನದಿ

12:15 PM Oct 17, 2020 | keerthan |

ಮಡಿಕೇರಿ: ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ ಪವಿತ್ರ ತೀರ್ಥೋದ್ಭವ ನಡೆಯಿತು. ಬೆಳಿಗ್ಗೆ 7.05 ಗಂಟೆಗೆ ಸರಿಯಾಗಿ ತಲಕಾವೇರಿಯಲ್ಲಿ ಕಾವೇರಿಯು ತೀರ್ಥರೂಪಿಯಾಗಿ ಭಕ್ತರಿಗೆ ದರ್ಶನ ನೀಡಿದೆ.

Advertisement

ವರ್ಷಕ್ಕೊಮ್ಮೆ ನಡೆಯುವ ಈ ತೀರ್ಥೋದ್ಭವಕ್ಕೆ ತಲಕಾವೇರಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆ 7 ಗಂಟೆ 5 ನಿಮಿಷಕ್ಕೆ ಕನ್ಯಾ ಲಗ್ನದಲ್ಲಿ ಬ್ರಹ್ಮ ಕುಂಡಿಕೆಯಿಂದ ತೀರ್ಥ ಉಕ್ಕಿ ಬಂದಿದೆ.

ಕೋವಿಡ್ ಕಾರಣದಿಂದ ಈ ಬಾರಿ ಕಡಿಮೆ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆಗಮಿಸುವ ಭಕ್ತರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ನೆಗೆಟಿವ್ ವರದಿ ಬಂದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು. ಈ ಬಾರಿ ಕೊಳದಲ್ಲಿ ಸ್ನಾನ ಮಾಡಲು ಅವಕಾಶ ನೀಡಲಾಗಿಲ್ಲ.

ಇದನ್ನೂ ಓದಿ:ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ

Advertisement

ಪಿಂಡ ಪ್ರಧಾನ ಕಾರ್ಯಕ್ಕೆ ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ರವರೆಗೆ ಅವಕಾಶವಿದೆ. ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಕ್ತರು ಸಂಗಮಕ್ಕೆ ಇಳಿಯಬಾರದು ಎಂದು ದೇವಾಲಯ ಸಮಿತಿ ಮನವಿ ಮಾಡಿದೆ.

ತುಲಾ ಸಂಕ್ರಮಣ ಜಾತ್ರಾ ವಿಶೇಷ ಪೂಜಾ ಕಾರ್ಯವು ಅಕ್ಟೋಬರ್ 17ರಿಂದ ನವೆಂಬರ್ 17ರ ವರೆಗೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next