Advertisement
ಅಕ್ಟೋಬರ್ 17ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ಪುಣ್ಯಕಾಲ ಜರಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಬಸ್ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಮಡಿಕೇರಿಯಿಂದ ತಲಕಾವೇರಿವರೆಗೆ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಬದಿ ಕಾಡು ಕಡಿಯುವುದು, ಸುಣ್ಣ ಬಣ್ಣ ಬಳಿಯುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರಿಗೆ ಪಿ.ಐ. ಶ್ರೀವಿದ್ಯಾ ಅವರು ನಿರ್ದೇಶ ನೀಡಿದರು.
Related Articles
Advertisement
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತುಲಾ ಸಂಕ್ರಮಣ ಜಾತ್ರೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ವಾಹನ ಸುಗಮ ಸಂಚಾರಕ್ಕೆ ಅಗತ್ಯ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾತನಾಡಿ ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.
ಸಣ್ಣುವಂಡ ಕಾವೇರಪ್ಪ ಅವರು ಮಾತನಾಡಿ ತುಲಾ ಸಂಕ್ರಮಣ ಜಾತ್ರೆ ಅನಂತರ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕೆ.ಟಿ. ದರ್ಶನ್ ಅವರು ಮಾಹಿತಿ ನೀಡಿದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಅನುಕೂಲಕ್ಕಾಗಿ ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಗಿರೀಶ್ ಅವರು ಸಭೆಗೆ ಮಾಹಿತಿ ನೀಡಿದರು.
ಪೊಲೀಸ್ ಇನ್‌ಸ್ಪೆಕ್ಟರ್ ಮೇದಪ್ಪ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ರವಿಕುಮಾರ್, ಸೆಸ್ಕ್ ಎಇಇ ದೇವಯ್ಯ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಳವಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಾಲ್ಟರ್ ಡಿ’ಮೆಲ್ಲೋ, ಭಾಗಮಂಡಲ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಇಒ ಜಗದೀಶ್ ಕುಮಾರ್ ಇತರರು ಹಲವು ಮಾಹಿತಿ ನೀಡಿದರು.
ಅ.17ರ ಸಂಜೆ 6.43ಕ್ಕೆ ತೀರ್ಥೋದ್ಭವಅ. 5ರಂದು ಬೆಳಗ್ಗೆ 10.15 ಗಂಟೆಗೆ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ. 15ರಂದು ಬೆಳಗ್ಗೆ 10.25 ಗಂಟೆಗೆ ವೃಶ್ಚಿಕ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ. 15ರಂದ ಮಧ್ಯಾಹ್ನ 3 ಗಂಟೆ 37 ನಿಮಿಷಕ್ಕೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು. ಅ. 17ರ ಸಂಜೆ 6.43 ಗಂಟೆಗೆ ಮೇಷ ಲಗ್ನದಲ್ಲಿ ಮೂಲ ಕಾವೇರಿ ತೀಥೋìದ್ಭವ ಜರಗಲಿದೆ. ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀಥೋìದ್ಭವಕ್ಕೆ ಆಗಮಿಸಿ ಕಾವೇರಿ ಮಾತೆಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯ ವ್ಯವಸ್ಥಾಪನಾ ಸಮಿತಿ ಕೋರಿದೆ. ನೇರ ವೀಕ್ಷಣೆಗೆ ಎಲ್.ಸಿ.ಡಿ. ವ್ಯವಸ್ಥೆ
ಭಾಗಮಂಡಲ-ಭಗಂಡೇಶ್ವರ-ತಲಕಾವೇರಿ ದೇವಾಲಯ ವ್ಯವ ಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರು ಮಾತನಾಡಿ ಅರ್ಚಕರು ಮತ್ತು ತಕ್ಕ ಮುಖ್ಯಸ್ಥರು ಕುಂಡಿಕೆ ಬಳಿ ಇರುತ್ತಾರೆ. ಉಳಿದಂತೆ ಗಣ್ಯರು, ಪತ್ರಕರ್ತರು ಒಂದು ಕಡೆ ಇರುತ್ತಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತುಲಾ ಸಂಕ್ರಮಣ ಒಂದು ತಿಂಗಳವರೆಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅವರು ಕೋರಿದರು. ಜಾತ್ರೆ ಸಂದರ್ಭದಲ್ಲಿ ಶಾಮಿಯಾನ, ಧ್ವನಿವರ್ಧಕ ವ್ಯವಸ್ಥೆ, ತೀಥೋìದ್ಭವ ದಿನದಂದು ಭಕ್ತರಿಗೆ ನೇರ ವೀಕ್ಷಣೆಗೆ ಎಲ್.ಸಿ.ಡಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.