Advertisement
ನಗರದ ಹೊರವಲಯದಲ್ಲಿರುವ ನೂತನವಾಗಿ ನಿರ್ಮಿಸಿರುವ ಅಮರಾವತಿ ಹೋಟೆಲ್‌ಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೇಕೆದಾಟು ಬಳಿ ಜಲಾಶಯ ನಿರ್ಮಿಸುವ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈಗಾಗಲೇ ಒಂದು ವರ್ಷದ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಹಾಗೂ ನೀರು ಸಂಗ್ರಹಕ್ಕೂ ಕ್ರಮ ಕೈಗೊಳ್ಳಲು ಯೋಜನೆಯನ್ನು ಶೀಘ್ರ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
Related Articles
ಹಾಸನದಲ್ಲಿ ನಿರ್ಮಾಣವಾಗಿರುವ ಏರ್ ಪೋರ್ಟ್ ಗೆ ಯಾವುದೇ ಹೆಸರಿಡುವ ಪ್ರಸ್ತಾಪ ನಡೆದಿಲ್ಲ. ಹಾಸನ ಏರ್‌ಪೋರ್ಟ್ ಅಂತಲೇ ಕರೆಯಬಹುದು. ರಾಜ್ಯದ ವಿವಿಧ ನಗರಗಳಲ್ಲಿರುವ ಏರ್‌ಪೋರ್ಟ್ಗಳಿಗೂ ಯಾವುದೇ ಹೆಸರಿಡುವ ಪ್ರಸ್ತಾಪವಾಗಿಲ್ಲ. ಇದುವರೆಗೂ ರಾಜ್ಯ ಸರ್ಕಾರದಲ್ಲಿ ಅಂಥ ಚರ್ಚೆಗಳು ನಡೆದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು.
Advertisement
ಇದನ್ನೂ ಓದಿ:ಜಗತ್ತಿನ ಅತಿದೊಡ್ಡ ಹಾಗೂ ಭವ್ಯ ಸ್ಟೆಪ್ ವೆಲ್ ‘ಚಾಂದ್ ಬಾವೊರಿ’..!
ಪ್ರತಿಪಕ್ಷದವರು ಹೇಳಿಕೆ ನೀಡ್ತಾರೆ:ಮೀಸಲಾತಿ ಹೋರಾಟದಲ್ಲಿ ಸಂಘರ್ಷಕ್ಕೆಡೆ ಮಾಡಿಕೊಡಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷದವರು ಹೇಳಿಕೆ ಕೊಡ್ತಾರೆ. ಯರ‍್ಯಾರು ಏನೇನು ಹೇಳಿಕೆ ಕೊಡಲಿ. ಆದರೆ ಸರ್ಕಾರ ಕಾನೂನು ಹಾಗೂ ವೈಜ್ಞಾನಿಕ ಬದ್ಧವಾಗಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಸಂಪನ್ಮೂಲ ಕ್ರೋಢೀಕರಣಕ್ಕೆ ಸೆಸ್:
ಕೊರೊನಾದಿಂದ ಖರ್ಚು ಹೆಚ್ಚಾಗಿದ್ದು, ಆದಾಯ ಕಡಿಮೆಯಾಗಿದೆ. ಆದ್ದರಿಂದ ಎಲ್ಲ ವಸ್ತುಗಳ ಮೇಲೆ ತೆರಿಗೆ ಹಾಕಿಲ್ಲ. ಕೆಲವೊಂದು ವಸ್ತುಗಳ ಮೇಲೆ ಮಾತ್ರ ಸೆಸ್ ಹಾಕಿದೆ. ಸಂಪನ್ಮೂಲ ಕ್ರೂಢೀಕರಣ ಮಾಡುವ ದೃಷ್ಟಿಯಿಂದ ಕೆಲವೊಂದು ಸೆಸ್ ಹಾಕಲಾಗಿದೆ. ಅವಶ್ಯಕತೆ ಇರುವ ಕಡೆ ಮಾತ್ರ ಆಗಿದೆ ಎಂದು ಬಿಜೆಪಿ ಸರ್ಕಾರ ಜನರ ಮೇಲೆ ಸೆಸ್ ಹಾಕುವ ಮೂಲಕ ಒತ್ತಡ ಹೇರುತ್ತಿದೆ ಎಂದು ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಅತಿಥಿ ಉಪನ್ಯಾಸಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ:
ಪದವಿ ಪೂರ್ವ ಕಾಲೇಜುಗಳಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಅವಶ್ಯಕತೆ ಇರುವಷ್ಟು ಕಡೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ನೋಡಿಕೊಂಡು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ವಿಶ್ವವಿದ್ಯಾಲಯಗಳ ಸ್ಥಾಪನೆ:
ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಕಾಲೇಜಿನಲ್ಲಿ ಶಿಕ್ಷಣ ಗುಣಮಟ್ಟ ಚೆನ್ನಾಗಿದ್ದ ಕಾರಣ ಅದನ್ನು ವಿಶ್ವವಿದ್ಯಾಲಯವನ್ನಾಗಿ ಮಾಡಲಾಗಿದೆ. ಹಲವಾರು ವರ್ಷಗಳಿಂದ ಬೇರೆಯವರು ಪ್ರಯತ್ನ ಮಾಡಿದ್ದರು. ಆದರೆ ಅದು ಆಗಿರಲಿಲ್ಲ. ನಾವು ಅದನ್ನು ವಿಶ್ವವಿದ್ಯಾಲಯವಾಗಿ ಮಾಡಿದ್ದೇವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯವಿಲ್ಲ. ಅದನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಹೇಳಿದರು. ರಾಮ ಮಂದಿರದ ಲೆಕ್ಕೆ ಕೊಡುತ್ತೇವೆ:
ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರು ನೀಡುತ್ತಿರುವ ದೇಣಿಗೆಯ ಲೆಕ್ಕವನ್ನು ಕೊಡುತ್ತೇವೆ. ಎಚ್.ಡಿ.ಕುಮಾರಸ್ವಾಮಿ ಅವರು, ದೇಣಿಗೆ ಸಂಗ್ರಹಿಸುವವರು ಗುಂಡಾಗಳು ಎಂದು ಹೇಳಿದ್ದಾರೆ. ಅದು ಆಧಾರರಹಿತ ಆರೋಪವಾಗಿದೆ. ಇದರಲ್ಲಿ ಯಾವುದೇ ತಿರುಳಿಲ್ಲ ಎಂದರು. ಮಾಜಿ ಸಂಸದ ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಅಮರಾವತಿ ಚಂದ್ರಶೇಖರ್, ಅಶ್ವಥ್, ನಾಗರಾಜು ಸೇರಿದಂತೆ ಮತ್ತಿತರರಿದ್ದರು.