Advertisement

“ಕಾವೇರಿ ಕೊಳ್ಳದ ಯೋಜನೆ ಪೂರ್ಣಗೊಳಿಸಲು ಕ್ರಮ’

11:01 PM Oct 12, 2019 | Team Udayavani |

ವಿಧಾನಸಭೆ: ಕಾವೇರಿ ಕೊಳ್ಳದ ವ್ಯಾಪ್ತಿಯ ಯೋಜನೆಗಳನ್ನು ಹಣಕಾಸಿನ ಇತಿಮಿತಿ ಗಮನದಲ್ಲಿಟ್ಟುಕೊಂಡು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್‌ ಶಾಸಕರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಯಡಿಯೂರಪ್ಪ, ಕಾವೇರಿ ಕೊಳ್ಳದ ವಿವಿಧ ಜಲಾಶಯಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ನಾಲಾ ಯೋಜನೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಿಲ್ಲ. ರಾಜ್ಯದ ಪ್ರಸಕ್ತ ವರ್ಷದ ಹಣಕಾಸು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

Advertisement

ಜೆಡಿಎಸ್‌ ಸದಸ್ಯರಾದ ಎಚ್‌.ಡಿ.ರೇವಣ್ಣ, ಸಿ.ಎನ್‌. ಬಾಲಕೃಷ್ಣ ಹಾಗೂ ಎ.ಟಿ.ರಾಮಸ್ವಾಮಿ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ. ಟೆಂಡರ್‌ ಹಂತದಲ್ಲಿರುವ ಯೋಜನೆಗಳಿಗೆ ತಡೆ ನೀಡಲಾಗಿದೆ. ಈಗಾಗಲೇ ಕೆಲವು ಯೋಜನೆಗಳಿಗೆ ಅನುಮೋದನೆ ನೀಡಿ, ಕಾಮಗಾರಿ ಆರಂಭಿಸಲಾಗಿದೆ. ಹೊಸ ಸರ್ಕಾರ ಬಂದ ಮೇಲೆ ಅವುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next