ರಾಮನಗರ: ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಕನ್ನಡ ಪರ ಸಂಘಟನೆಗಳಿಂದ ಬೆಂ-ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಯಿತು.
ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಳಿಕ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಯಿತು.
ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು. ಪ್ರತಿಭಟನಾಕಾರರು ಹೈವೆಯಲ್ಲಿ ಕೈಯಲ್ಲಿ ಖಾಲಿ ಬಿಂದಿಗೆ ಹೀಡುಕೊಂಡು ಉರುಳು ಸೇವೆ ಮಾಡುವ ಮೂಲಕ ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸಿದರು.
ಈ ವೇಳೆ ಹೆದ್ದಾರಿ ಬಂದ್ ಮಾಡಿ ಸರಕಾರದ ವಿರುದ್ಧ ಘೋಷಣೆ ಕೂಗಲು ಮುಂದಾದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಇದನ್ನೂ ಓದಿ: Facebook advertising: ರಾಶಿ ಹರಳು ಖರೀದಿಸಲು ಹೋಗಿ 19 ಸಾವಿರ ಕಳೆದುಕೊಂಡ ಉದ್ಯಮಿ