Advertisement

ಗ್ರಾಮಾಭಿವೃದ್ಧಿಗೆ ಸರ್ಕಾರ ಆದ್ಯತೆ: ಸಂಗಣ

04:03 PM Mar 09, 2020 | Naveen |

ಕವಿತಾಳ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಉಜ್ವಲ ಯೋಜನೆ, ಸೌಭಾಗ್ಯ ಯೋಜನೆ, ಕೃಷಿ ಸಮ್ಮಾನ, ಫಸಲು ಬಿಮಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಕೇಂದ್ರ ಸರಕಾರ ರೈತರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.

Advertisement

ಮಸ್ಕಿ ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ 56 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಗ್ರಾಮ ಪಂಚಾಯ್ತಿ ಸೌಧವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ 20 ಕೋಟಿ ಅನುದಾನ ನೀಡುವ ಮೂಲಕ ತುಂಗಭದ್ರಾ ಎಡದಂಡೆ ಕಾಲುವೆ ನೀರು ಬಳಸುವ ರೈತರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಜಲಾಶಯ ನಿರ್ಮಾಣವಾದರೆ ಈ ಭಾಗದ ರೈತರು ಎರಡು ಬೆಳೆ ಸುಲಭವಾಗಿ ತೆಗೆಯಬಹುದು ಎಂದರು.

ಗ್ರಾಮದಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿದ್ದ ಗ್ರಾಮ ಪಂಚಾಯಿತಿ ಸೌಧವನ್ನು ನಿರ್ಮಿಸುವ ಮೂಲಕ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಮುಂಬರುವ ಉಪ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಬೇಕು ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಹೊಸದಾಗಿ ಆಯ್ಕೆಯಾದ ಪಂಚಾಯ್ತಿಗೆ ನೂತನ ಭವ್ಯ ಕಟ್ಟಡ ನಿರ್ಮಾಣ, ಪ್ರೌಢಶಾಲೆ, ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಲ್ಲದಗುಡ್ಡ ಗ್ರಾಮದಲ್ಲಿ ಕೈಗೊಳ್ಳಲಾಗಿದೆ. ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು 75 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದೆ. ಮರಕಂದಿನ್ನಿ ಹತ್ತಿರ ಕೆರೆ ನಿರ್ಮಾಣ, ನೀರಾವರಿ ಪ್ರದೇಶಗಳಲ್ಲಿನ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ ಎಂದರು.

Advertisement

ತುಂಗಭದ್ರ ಕಾಡಾ ಅಧ್ಯಕ್ಷ ಆರ್‌.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್‌ ಮಾತನಾಡಿದರು. ಅಯ್ಯಪ್ಪ ತಾತ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಶರಣಪ್ಪಗೌಡ ಜಾಡಲದಿನ್ನಿ, ಬಸವಂತರಾಯ ಕುರಿ, ಸಂತೋಷ ರಾಜಗುರು, ಗ್ರಾಮ ಪಂಚಾಯ್ತಿ ಅಧ್ಯಕ್ಷ ಕುರುಮಪ್ಪ, ಚಂದ್ರಕಾಂತ ಪಾಟೀಲ, ಸೂಗಪ್ಪ, ಶಿವುಕುಮಾರ ವಟಗಲ್‌, ಕೊಟ್ರಯ್ಯ ಸ್ವಾಮಿ, ಅಮರೇಶಪ್ಪ, ರುದ್ರಯ್ಯ ಸ್ವಾಮಿ, ಪಂಪನಗೌಡ, ಭಾಸ್ಕರರಾವ್‌, ಕರಿಬಸಯ್ಯ ಸ್ವಾಮಿ, ಶರಣಪ್ಪ ಪಟ್ಟೇದ, ವೆಂಕಟಸಿಂಗ್‌ ಹಜಾರಿ, ಪಿಡಿಒ ಸಂದೇಶ ಬೆಳವಾಟ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next