Advertisement
ಕಳೆದ ಒಂದು ವರ್ಷದಿಂದ ಮಣ್ಣು ಹಾಕಿ ಮಾಡಲಾದ ತಾತ್ಕಾಲಿಕ ಮಣ್ಣಿನ ರಸ್ತೆಯ ಮೇಲೆ ಮರಳು ಜರಿದು ಬಿದ್ದಿತ್ತು. ಶಾಸಕ ಡಾ| ಭರತ್ ಶೆಟ್ಟಿ ಅವರ ಸಹಕಾರದಲ್ಲಿ ವಾಹನ ಓಡಾಟಕ್ಕೆ ತಾತ್ಕಾಲಿಕ ದುರಸ್ತಿ ಕ್ರಮ ಕೈಗೊಳ್ಳಲಾಗಿತು. ಈಗಿರುವ ತಾತ್ಕಾಲಿಕ ರಸ್ತೆ ಸಮುದ್ರ ಮಟ್ಟದಲ್ಲಿದ್ದು, ಈಗಿರುವ ಸ್ಥಿತಿಯಲ್ಲೇ ಡಾಮರು ಕಾಮಗಾರಿ ನಡೆಸಲಾಗಿದೆ.
ಈ ಭಾಗದಲ್ಲಿ ವಿಸ್ತಾರವಾದ ಕಾಂಕ್ರೀಟ್ ರಸ್ತೆ ನಿರ್ಮಿಸಿ ಪಾದಾಚಾರಿ, ಸೈಕ್ಲಿಂಗ್ ಮತ್ತಿತರ ಬೀಚ್ ಚಟುವಟಿಕೆಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿತ್ತು. ಕಾರಣಾಂತರದಿಂದ ಅನುದಾನ ಬಿಡುಗಡೆಯಾಗದ ಕಾರಣ ಇದೀಗ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ.ವೆಚ್ಚದಲ್ಲಿ ಡಾಮರು ಕಾಮಗಾರಿ ಮಾಡಲಾಗಿದೆ ಎಂದು ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ ತಿಳಿಸಿದರು.
Related Articles
ಬೀಚ್ ಟೂರಿಸಂ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸುರತ್ಕಲ್ ತಣ್ಣೀರುಬಾವಿ, ಎನ್‌ಐಟಿಕೆ ಬೀಚ್ ವ್ಯಾಪ್ತಿಯಲ್ಲಿ ಕಾರಿಡಾರ್ ನಿರ್ಮಾಣದ ಯೋಜನೆಯಿದೆ. ಇದಕ್ಕೆ ಹೆಚ್ಚಿನ ಅನುದಾನದ ಅಗತ್ಯವಿರುವುದರಿಂದ ಡಿಪಿಆರ್ ರಚಿಸಿ ಸರಕಾರಕ್ಕೆ ಸಲ್ಲಿಸಲಾಗುವುದು. ನನ್ನ ಕ್ಷೇತ್ರದಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ಅನುದಾನ ಒದಗಿಸಲು ಮನವಿ ಸಲ್ಲಿಸಲಾಗುವುದು.
-ಡಾ| ಭರತ್ ಶೆಟ್ಟಿ ವೈ.,
ಶಾಸಕರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ
Advertisement