Advertisement
ಕಯ್ಯಾರರು ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳವಳಿಯ ಮುಂಚೂಣಿ ನಾಯಕ ರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕರಾಗಿ ದುಡಿದ್ದಾರೆ. ಕಾಸರಗೋಡು ಕರ್ನಾಟಕಕ್ಕೆ ಸೇರ ಬೇಕೆಂಬ ಮಹೋನ್ನತ ಉದ್ದೇಶದಿಂದ ಬದುಕನ್ನು ಅದಕ್ಕಾಗಿ ಮುಡಿಪಾಗಿಟ್ಟಿದ್ದರು. ಅವರ ಅನನ್ಯ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರಕಾರ ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಆದರೆ ಸರಕಾರ ಪಠ್ಯದಿಂದ ಅವರ ಹೆಸರನ್ನು ತೆಗೆದು ಹಾಕಿರುವುದು ವಿಪರ್ಯಾಸ. ಇದರ ವಿರುದ್ಧ ಗ್ರಾಮ ಮಟ್ಟದಿಂದ ದೇಶವ್ಯಾಪಿ ಹೋರಾಟ ನಡೆಸಲಾಗುವುದು ಎಂದರು.
ಮಂಗಳೂರಿನ ಎ.ಬಿ. ಶೆಟ್ಟಿ ವೃತ್ತವನ್ನು ಕೆಡವಿ ಅವರ ವ್ಯಕ್ತಿತ್ವಕ್ಕೆ ಅಗೌರವ ತೋರಿಸಲಾಗಿದೆ. ದೂರದೃಷ್ಟಿಯ ರಾಜಕೀಯ ಮುತ್ಸದ್ಧಿಯಾಗಿದ್ದ ಅವರು ಉತ್ತಮ ವೈದ್ಯಕೀಯ ಸವಲತ್ತು ಸೇರಿದಂತೆ ಕರಾವಳಿಯ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ. ಸ್ವಾತಂತ್ರ್ಯ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಕಾರಾಗೃಹ ಶಿಕ್ಷೆ ಅನುಭವಿಸಿದ್ದರು. ಅವರ ಸ್ಮರಣಾರ್ಥ ದಶಕಗಳ ಹಿಂದೆ ನಿರ್ಮಿಸಿದ್ದ ವೃತ್ತವನ್ನು ಇತ್ತೀಚೆಗೆ ಸ್ಮಾರ್ಟ್ ಸಿಟಿ ಕಾಮಗಾರಿ ನೆಪದಲ್ಲಿ ನೆಲಸಮಗೊಳಿಸಲಾಗಿದೆ. ವೃತ್ತವನ್ನು ಶೀಘ್ರ ಮರು ನಿರ್ಮಾಣ ಮಾಡಿ ನಾಮಫಲಕ ಅಳವಡಿಸಬೇಕು ಎಂದು ಅಜಿತ್ ಕುಮಾರ್ ಹೇಳಿದರು.