Advertisement
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಭಾವಿ ಕೈಗಾರಿಕೋದ್ಯಮಿಗಳಿಗೆ ಹಾಗೂ ನವೋದ್ಯಮ ಗಳಿಗಾಗಿ ಪ್ರತಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ/ಕೆಎಎಸ್ ಎಸ್‌ಐಡಿಸಿ ಗಳಿಗೆ ರಾಜ್ಯ ಸರ್ಕಾರ ಸೂಚಿಸಬೇಕು ಎಂದರು. ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿಯಿಂದ ಮೂಗೂರು ಕ್ರಾಸ್ ವರೆಗಿನ 12 ಕಿ.ಮೀ. ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಬೇಕು ಎಂದರು.
Related Articles
Advertisement
ಗೋಷ್ಠಿಯಲ್ಲಿ ಕಾಸಿಯಾ ಗೌರವ ಪ್ರಧಾನ ಕಾರ್ಯದರ್ಶಿ ಎನ್.ಆರ್. ಜಗದೀಶ್, ಜಂಟಿ ಕಾರ್ಯದರ್ಶಿ ಪಿ.ಎನ್. ಜೈಕುಮಾರ್, ಚಾ.ನಗರ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎ.ಜಯಸಿಂಹ, ಗ್ರಾಮೀಣಾಭಿವೃದ್ಧಿ ಅಧ್ಯಕ್ಷ ಸುಬ್ರಹ್ಮಣಿಯನ್ ಮತ್ತಿತರರಿದ್ದರು.
ಬದನಗುಪ್ಪೆ ಕೈಗಾರಿಕಾ ವಲಯದಲ್ಲಿ ಸೌಲಭ್ಯ ಕಲ್ಪಿಸಿ : ಬದನಗುಪ್ಪೆ ಕೈಗಾರಿಕಾ ವಸಾಹತುಗಳಲ್ಲಿ ನೀರು ಸರಬರಾಜಿನ ಕೊರತೆಯಿಂದಾಗಿ ಕೈಗಾರಿಕೋದ್ಯಮಿಗಳು ತೊಂದರೆಗೀಡಾಗಿದ್ದಾರೆ. ಈ ಸಮಸ್ಯೆ ಬಗೆಹರಿಸಬೇಕು. ಕೈಗಾರಿಕೀಕರಣದಲ್ಲಿ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿರುವುದರಿಂದ, ನೂತನ ಉದ್ದಿಮೆ ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ನೂತನ ಉದ್ದಿಮೆಗಳಿಗೆ 5 ವರ್ಷಗಳ ಕಾಲ ಜಿಎಸ್‌ಟಿ, ಪಿಎಫ್ ಮತ್ತು ಇಎಸ್‌ಐ ಆಸ್ತಿ ತೆರಿಗೆ ಹಾಗೂ ವಿದ್ಯುತ್‌ಬಳಕೆಯ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕು.ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕ್ರಿಮಿನಲ್ ಚಟುವಟಿಕೆಗಳು ಹೆಚ್ಚಾಗುತ್ತಿದು ತ್ವರಿತವಾಗಿ ಒಂದು ಪೊಲೀಸ್ ಠಾಣೆ ತೆರೆಯಬೇಕು. ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಬ್-ಸ್ಟೇಷನ್ ಕಾರ್ಯಾಚರಣೆ ಆರಂಭಿಸಲು ಸೆಸ್ಕ್ ವಿಳಂಬ ನೀತಿ ಅನುಸರಿಸುತ್ತಿದ್ದು, ತ್ವರಿತವಾಗಿ ಸಬ್-ಸ್ಟೇಶನ್ ಆರಂಭಿಸುವಂತೆ ಸೆಸ್ಕ್ಗೆ ಆದೇಶಿಸಬೇಕು ಎಂದು ಕಾಸಿಯಾ ಅಧ್ಯಕ್ಷರು ತಿಳಿಸಿದರು.