ರಾಣಿಬೆನ್ನೂರ: ಶಿರಾ ಮತ್ತು ಆರ್.ಆರ್ ನಗರದ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಕೈಗೊಳ್ಳಲಾದ ಕ್ರಮಗಳಲ್ಲಿ ಭ್ರಷ್ಟಾಚಾರ, ನೆರೆಹಾವಳಿಗೀಡಾದ
ಜನರ ನಿರ್ಲಕ್ಷ ಹೀಗೆ ಸರಕಾರದ ಮುಂತಾದ ವಿಷಯಗಳ ಬಗ್ಗೆ ಬೇಸತ್ತಿರುವ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರುತ್ತಿದ್ದಾರೆ.
ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ ನಾಲ್ಕು ಸ್ಥಾನಗಳಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|
ಆರ್.ಎಂ. ಕುಬೇರಪ್ಪ ಸೇರಿದಂತೆ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ಕೋಳಿವಾಡ ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಅವರು ನಮ್ಮ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ತಂದೆಯನ್ನು ಕೊಂದ 16ವರ್ಷದ ಪುತ್ರಿ, ಪೊಲೀಸರಿಗೆ ಕರೆ ಮಾಡಿ ಶರಣಾದಳು! ಏನಿದು ಘಟನೆ
ಚುನಾವಣೆ ಮುಗಿದ ನಂತರ ಬೆಂಬಲಿಗರ ಜೊತೆ ಸಭೆ ನಡೆಸಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕೋಳಿವಾಡ ವಿವರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸ್ಥಳೀಯ ಶಾಸಕರ ಜೊತೆ ಚರ್ಚಿಸಿ ಮಠದ ಅಭಿವೃದ್ಧಿಗೆ ಸಹಾಯ ಮಾಡುವುದಾಗಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಇತ್ತೀಚಿಗೆ ನಡೆದ ದಿಂಡದಹಳ್ಳಿ ಮಠದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಹೇಳಿರುವುದು ನೀತಿಸಂಹಿತೆ ಉಲ್ಲಂಘನೆ ಆಗುತ್ತದೆ. ಆದರೆ ಅವರ ಪಕ್ಷದ ಸರ್ಕಾರ ಇರುವುದರಿಂದ ಪೊಲೀಸರು ಯಾವ ಕ್ರಮ ಜರುಗಿಸಲಾರರು ಎಂದರು.