Advertisement
ಗುರುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದೆರಡು ವಿಧಾನಸಭಾ ಚುನಾವಣೆಗಳಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟಿರುವ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಬುದ್ಧಿ ಭ್ರಮಣೆಯಾದವರಂತೆ ಹತಾಶೆಯಿಂದ ಮಾತನಾಡಿ ತಮ್ಮ ಸಣ್ಣತನ ಪ್ರದರ್ಶನ ಮಾಡುತ್ತಿದ್ದಾರೆ. ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿರುವ ಇವರಿಗೆ ಕಾಂಗ್ರೆಸ್ ಮುಖಂಡರು ಸೂಕ್ತ ಚಿಕಿತ್ಸೆ ಕೊಡಿಸಿ ಸರಿದಾರಿಗೆ ತರಬೇಕು. ಇಲ್ಲದಿದ್ದರೆ ನಾವೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಡಳಿತ ಮೆಚ್ಚಿ ಐದು ವರ್ಷಗಳ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ನೀಡಿ ಬೇಷರತ್ ಬೆಂಬಲ ಘೋಷಿಸಿದ್ದಾರೆ. ಇನ್ನು ಚಂದ್ರಶೇಖರ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಆಕ್ರೋಶದಿಂದ ನುಡಿದರು.
Related Articles
Advertisement
ಕೃಷ್ಣರಾಜ ಸಾಗರದಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕರ್ತರು ಅಲ್ಲಿಂದ ನೇರವಾಗಿ ಮಂಡ್ಯ ನಗರದಲ್ಲಿ ನಡೆಯುವ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದರು.
ಸಭೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಕೆ.ಟಿ.ಗಂಗಾಧರ್, ಜಿಪಂ ಮಾಜಿ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಜಿಪಂ ಸದಸ್ಯ ಎಚ್.ಟಿ.ಮಂಜು, ತಾಪಂ ಉಪಾಧ್ಯಕ್ಷ ಜಾನಕೀರಾಂ, ಕೆ.ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷ ಕೆ.ಎನ್.ಕೃಷ್ಣ, ರಾಮಚಂದ್ರನ್, ಕಿಕ್ಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಕೆ.ಜೆ. ತಮ್ಮಣ್ಣ, ಬೂಕನಕೆರೆ ಹೋಬಳಿ ಅಧ್ಯಕ್ಷ ನಂದೀಶ್, ಶೀಳನೆರೆ ಹೋಬಳಿ ಅಧ್ಯಕ್ಷ ಸ್ವಾಮಿಗೌಡ, ಸಂತೇಬಾಚಹಳ್ಳಿ ಹೋಬಳಿ ಅಧ್ಯಕ್ಷ ಗೊರವಿ ಮಂಜೇಗೌಡ, ಅಕ್ಕಿಹೆಬ್ಟಾಳು ಹೋಬಳಿ ಅಧ್ಯಕ್ಷ ಸುಬ್ಬೇಗೌಡ, ಕಸಬಾ ಹೋಬಳಿಯ ಅಧ್ಯಕ್ಷ ವಸಂತಕುಮಾರ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
ಪುರಸಭೆ ಆಡಳಿತವನ್ನು ತನ್ನ ತೆಕ್ಕೆಯಲ್ಲಿಟ್ಟುಕೊಂಡು ಬಡಜನರನ್ನು ಹಿಂಸಿಸುತ್ತಿರುವ ಮಾಜಿ ಶಾಸಕ ಚಂದ್ರಶೇಖರ್‌ಗೆ ಮುಂಬರುವ ಪುರಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇನೆ. ಪುರಸಭೆ ಕಟ್ಟಡದ ಮೇಲೆ ಜೆಡಿಎಸ್ ಬಾವುಟ ಹಾರಿಸುತ್ತೇನೆ. ನಾರಾಯಣಗೌಡ, ಶಾಸಕ