Advertisement
ವೇಣುಗೋಪಾಲ್ ಅವರ ಬದಕಲು ಗುಲಾಂ ನಬಿ ಆಜಾದ್ ಅಥವಾ ಚೆಲ್ಲಕುಮಾರ್ ಅವರನ್ನು ರಾಜ್ಯ ಉಸ್ತುವಾರಿಯಾಗಿ ನೇಮಿಸುವ ಸಂಬಂಧ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.
Related Articles
Advertisement
ಗುಲಾಂ ನಬಿ ಆಜಾದ್ ಅವರು ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದ ಉಸ್ತುವಾರಿಯಾಗಿಯೂ ಕೆಲಸ ಮಾಡಿದವರು. ಜತೆಗೆ ಇತ್ತೀಚೆಗೆ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಎದುರಿಸುವ ತೀರ್ಮಾನ ಮಾಡಿರುವುದರಿಂದ ಸೀಟು ಹೊಂದಾಣಿಕೆ ಹಾಗೂ ರಡೂ ಪಕ್ಷಗಳ ನಡುವಿನ ಸಮನ್ವಯತೆ ದೃಷ್ಟಿಯಿಂದ ಗುಲಾಂ ನಬಿ ಆಜಾದ್ ಅವರಿಗೆ ಕರ್ನಾಟಕದ ಉಸ್ತುವಾರಿ ನೀಡುವುದು ಸೂಕ್ತ ಎಂದು ರಾಜ್ಯದ ನಾಯಕರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಕೆ.ಸಿ. ವೇಣುಗೋಪಾಲ್ ಅವರ ಮೇಲಿನ ರೇಪ್‌ಕೇಸ್ ಅರೋಪ ಆಡಳಿತ ಹಾಗೂ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಕೇರಳದಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾನೂನಿನ ಪ್ರಕಾರ ಹೋರಾಟ ನಡೆಸಲಾಗುವುದು.– ಡಾ| ಜಿ.ಪರಮೇಶ್ವರ, ಉಪ ಮುಖ್ಯಮಂತ್ರಿ