Advertisement

ಗೋವಾದಲ್ಲಿ ಕಾಂಗ್ರೆಸ್-ಟಿಎಂಸಿ ಮೈತ್ರಿ ವದಂತಿ ನಿರಾಧಾರ:ಕೆ.ಸಿ.ವೇಣುಗೋಪಾಲ್

04:12 PM Jan 12, 2022 | Team Udayavani |

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಬಹುದು ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದೆ.

Advertisement

ಆದರೆ ಅದೆಲ್ಲ ಸುಳ್ಳು ಎಂದು ಕಾಂಗ್ರೆಸ್ ಹಿರೀಯ ನಾಯಕ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಭೇಟಿಯ ವೇಳೆ ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣವಾಗಿ ಆಧಾರ ರಹಿತ ಎಂದು ವೇಣುಗೋಪಾಲ್ ತಮ್ಮ ಟ್ವೀಟ್ ನಲ್ಲಿ ಬರೆದಿದ್ದಾರೆ.

ರಾಹುಲ್ ಗಾಂಧಿಯವರು ಸೋಮವಾರದ ಸಭೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಜತೆಗಿನ ಸಂಭಾವ್ಯ ಮೈತ್ರಿ ಬಗ್ಗೆ ಚರ್ಚಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ನಿರಾಧಾರ ಮತ್ತು ಸುಳ್ಳು ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next