Advertisement

Telangana; 119ರ ಪೈಕಿ 115 ಸ್ಥಾನಗಳಿಗೆ BRS ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

04:52 PM Aug 21, 2023 | Team Udayavani |

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ 119 ಸ್ಥಾನಗಳ ಪೈಕಿ 115 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಆರ್‌ಎಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸೋಮವಾರ ಪ್ರಕಟಿಸಿದ್ದಾರೆ. ಕೆಸಿಆರ್ ಅವರು ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗಜ್ವೆಲ್ ಮತ್ತು ಕಾಮರೆಡ್ಡಿ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಕೆಸಿಆರ್, ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ.ಅಕ್ಟೋಬರ್ 16 ರಂದು ವಾರಂಗಲ್‌ನಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. 119 ಸ್ಥಾನಗಳಲ್ಲಿ ಬಿಆರ್‌ಎಸ್ 95-105 ಸ್ಥಾನಗಳನ್ನು ನಮ್ಮ ಪಕ್ಷ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಜತೆಗಿನ ಬಿಆರ್‌ಎಸ್ ಸ್ನೇಹ ಮುಂದುವರಿಯಲಿದೆ ಎಂದರು.

ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ, ಇದು ಮುಖ್ಯಮಂತ್ರಿ ನಾಯಕತ್ವ ಮತ್ತು ಬಿಆರ್‌ಎಸ್ ಆಡಳಿತದ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next