Advertisement

ತೆಲಂಗಾಣ ಸಿಎಂ ಭೇಟಿ ಮಾಡಿದ ಕುಮಾರಸ್ವಾಮಿ: ಏನಿದು ಹೊಸ ರಾಷ್ಟ್ರೀಯ ಪಕ್ಷ ರಚನೆ ಸಿದ್ದತೆ?

04:03 PM Sep 11, 2022 | Team Udayavani |

ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೈದರಾಬಾದ್ ನಲ್ಲಿ ಇಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

Advertisement

ರಾಷ್ಟ್ರೀಯ ಮಟ್ಟದಲ್ಲಿ ಪಕ್ಷವನ್ನು ಆರಂಭಿಸಲು ಯೋಜನೆ ರೂಪಿಸಿರುವ ಕೆ ಚಂದ್ರಶೇಖರ್ ರಾವ್ ಅವರು 2024ರ ಲೋಕಸಭಾ ಚುನಾವಣೆಗೆ ತಯಾರಿ ಮಾಡುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧವಾಗಿ ಪರ್ಯಾಯ ಶಕ್ತಿಯೊಂದನ್ನು ರೂಪಿಸುವ ಸಲುವಾಗಿ ಕೆಸಿಆರ್ ಓಡಾಟದಲ್ಲಿ ತೊಡಗಿದ್ದಾರೆ. ಹೀಗಾಗಿ ಕೆಸಿಆರ್ ಮತ್ತು ಎಚ್ ಡಿಕೆ ಭೇಟಿ ಮಹತ್ವ ಪಡೆದಿದೆ.

ತೆಲಂಗಾಣದ ಅಭಿವೃದ್ಧಿ, ರಾಷ್ಟ್ರೀಯ ರಾಜಕೀಯದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ, ಪ್ರತಿಪಕ್ಷಗಳ ಒಗ್ಗಟ್ಟು ಗಟ್ಟಿಗೊಳಿಸುವಲ್ಲಿ ಕೆಸಿಆರ್ ನಿರ್ವಹಿಸುತ್ತಿರುವ ಪ್ರಮುಖ ಪಾತ್ರ ಮತ್ತು ಇತರ ರಾಜಕೀಯ ಪಕ್ಷಗಳ ಪಾತ್ರವೂ ಅವರ ಸಭೆಯಲ್ಲಿ ಚರ್ಚೆಗೆ ಬಂದವು ಎಂದು ಮೂಲಗಳು ತಿಳಿಸಿದೆ.

ಇದನ್ನೂ ಓದಿ:ಶಿಂಧೆ ಬಣ ಮತ್ತು ಠಾಕ್ರೆ ಬಣದ ನಡುವೆ ಘರ್ಷಣೆ; ಐವರ ಬಂಧನ

ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಮುಖ್ಯಸ್ಥ ಕೆಸಿಆರ್ ಈ ಹಿಂದೆ ಬೆಂಗಳೂರಿಗೆ ತೆರಳಿ ಕುಮಾರಸ್ವಾಮಿ ಮತ್ತು ಅವರ ತಂದೆ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿದ್ದರು.

Advertisement

ಕೆ.ಚಂದ್ರಶೇಖರ್ ರಾವ್ ಅವರ ಹೊಸ ರಾಷ್ಟ್ರೀಯ ಪಕ್ಷವು ದಸರಾ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಕೆಸಿಆರ್ ಅವರು ಕಳೆದ ತಿಂಗಳು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನೂ ಭೇಟಿಯಾಗಿದ್ದರು. ಅಲ್ಲದೆ ಜಂಟಿ ಸುದ್ದಿಗೋಷ್ಠಿಯಲ್ಲೂ ಭಾಗವಹಿಸಿದ್ದರು.

ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಹಲವು ವಿರೋಧ ಪಕ್ಷಗಳು ಸಭೆ ನಡೆಸುತ್ತಿದೆ. ಕೆಸಿಆರ್ ಅವರು ಹಲವು ನಾಯಕರನ್ನು ಭೇಟಿಯಾಗಿದ್ದಾರೆ. ಜೆಡಿಎಸ್ ನಾಯಕ ಕುಮಾರಸ್ವಾಮಿ ಭೇಟಿಯೂ ಕೆಸಿಆರ್ ಅವರ ರಾಷ್ಟ್ರೀಯ ನಾಯಕನಾಗುವ ಪ್ರಯತ್ನದ ಮತ್ತೊಂದು ನಡೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next