Advertisement
ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ಬೇಸಿಗೆ ಆರಂಭವಾಗುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆಯ ದೂರುಗಳು ಕೇಳಿ ಬರುತ್ತಿದ್ದು, ಅಧಿಕಾರಿಗಳು ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಮತ್ತು ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದರೆ ಅದರ ಮಾಹಿತಿ ಇಲಾಖೆ ಹಿರಿಯ ಅಧಿಕಾರಿ ಗಳಿಗೆ ಸಲ್ಲಿಸಬೇಕೆಂದು ತಾಕೀತು ಮಾಡಿದರು.
Related Articles
Advertisement
ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಜಿಪಂಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್,ಬಂಕ್ ಮುನಿಯಪ್ಪ ಹಾಗೂ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಜಾನುವಾರಗಳಿಗೆ ನೀರು ಪೂರೈಸಿ :
ಜಿಲ್ಲೆಯಲ್ಲಿ 35 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ ಎಂದುಅಧಿಕಾರಿಯ ಮಾಹಿತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಜಿಪಂ ಅಧ್ಯಕ್ಷರು, ಜಿಲ್ಲೆಯಲ್ಲಿ ಈ ಸಂಬಂಧ ಪ್ರತಿ 15 ದಿನಕ್ಕೊಮ್ಮೆ ತಾಲೂಕುಮಟ್ಟದ ಅಧಿಕಾರಿಗಳು ಸಭೆ ಸೇರಬೇಕು. ಸಾರ್ವಜನಿಕರ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ತೊಟ್ಟಿಗಳನ್ನು ನಿರ್ಮಿಸಿ ಜಾನುವಾರಗಳಿಗೆ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ನಿರ್ದೇಶನ ನೀಡಿದರು.
ಕೋವಿಡ್ ನಿಯಮ ಪಾಲನೆ ಕಡ್ಡಾಯ : ಕೋವಿಡ್ ಸಾಂಕ್ರಾಮಿಕ ರೋಗವು ಹರಡುತ್ತಿರುವ 2ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿ, ಸರ್ಕಾರ ರೂಪಿಸಿರುವ ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಮಾರ್ಗಸೂಚಿ ನಿಯಮ ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಇಲಾಖೆ ಗುರುತಿಸಲ್ಪಟ್ಟ ವಯೋಮಾನದವರು, ವರ್ಗದವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಸೂಕ್ತ ಕ್ರಮವಹಿಸುವಂತೆ ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.
ಆಯುಷ್ ಇಲಾಖೆಗೆ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡುತ್ತಾರೆ. ಆ ಇಲಾಖೆ ಅಧಿಕಾರಿ-ಸಿಬ್ಬಂದಿಗೆಕಾರು ಕೊಡ್ತಾರೆ. ಅದು ಹೊರತುಪಡಿಸಿ ಇಲಾಖೆಯ ಕಾರ್ಯವೈಖರಿಸಮಾಧಾನಕರವಾಗಿಲ್ಲ. ಇಲಾಖೆ ಸದೃಢಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.-ಎಂ.ಬಿ ಚಿಕ್ಕನರಸಿಂಹಯ್ಯ, ಜಿಪಂ ಅಧ್ಯಕ್ಷ