Advertisement

ಕುಡಿವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಿ

10:23 AM Mar 18, 2021 | Team Udayavani |

ಕೋಲಾರ: ಬೇಸಿಗೆ ಪ್ರಾರಂಭವಾಗಿದ್ದು, ನೀರಿನ ಸಮಸ್ಯೆಯ ತೀವ್ರತೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಕುಡಿಯುವನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾಸಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕಗ್ರಾಮಗಳನ್ನು ಗುರುತಿಸಿ ಖಾಸಗಿ ಕೊಳವೆಬಾವಿಗಳು ಅಥವಾ ಟ್ಯಾಂಕರ್‌ ಮೂಲಕನೀರು ಪೂರೈಸಿ ಕುಡಿಯುವ ನೀರಿನ ಸಮಸ್ಯೆಬಗೆಹರಿಸಿ. ಈಗಾಗಲೇ ಜಿಲ್ಲೆಯಲ್ಲಿ 45ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಸಿದ್ಧತೆ ಮಾಡಿಕೊಳ್ಳಿ: ಬೇಸಿಗೆ ಆರಂಭವಾಗುತ್ತಿದೆ,ದನ-ಕರು ಕುರಿಗಳಿಗೆ ಮೇವು ಕೊರತೆ ಆಗದಂತೆಸಿದ್ಧತೆ ಮಾಡಿಕೊಳ್ಳಬೇಕು. ಕಾಡುಪ್ರಾಣಿಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕ್ರಿಮಿನಲ್‌ ಪ್ರಕರಣ ದಾಖಲಿಸಿ: 2019-20 ನೇ ಸಾಲಿನ ಅನುದಾನದಲ್ಲಿ ಪ್ರೌಢಶಾಲೆಗಳ ಪೀಠೊಪಕರಣಗಳನ್ನು ಸರಬರಾಜು ಮಾಡಲು ಟೆಂಡರ್‌ದಾರರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಣ  ಪಾವತಿಸಿದ್ದಾರೆ. ಆದರೆ ಇದುವರೆಗೂಪೀಠೊಪಕರಣಗಳ ಸರಬರಾಜು ಆಗಿಲ್ಲ. ಈ ಬಗ್ಗೆಕಳೆದ ಸಭೆಯಲ್ಲಿ ತಿಳಿಸಿದ್ದರೂ ಕ್ರಮ ಆಗಿಲ್ಲ. ಪೀಠೊಪಕರಣಗಳ ಸರಬರಾಜು ಆಗದೆ ಹಣಬಿಡುಗಡೆ ಮಾಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಬಿಲ್‌ ಪಾವತಿ ಆಗಿಲ್ಲ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಯಶೋಧ ಕೃಷ್ಣಮೂರ್ತಿ ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿರುವುದಕ್ಕೆ ಟ್ಯಾಂಕರ್‌ ಅವರಿಗೆಬಿಲ್‌ ಪಾವತಿ ಆಗಿಲ್ಲ. ಈ ಬಗ್ಗೆ ದೂರುಗಳು ಬಂದಿದ್ದು, ಗ್ರಾಪಂ ಮಟ್ಟದಲ್ಲಿ ಬಿಲ್‌ಪಾವತಿಯಾಗುವಂತೆ ಕ್ರಮ ವಹಿಸುವಂತೆ ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಸಭೆಯಲ್ಲಿ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಅರುಣ್‌ ಪ್ರಸಾದ್‌, ಆರೋಗ್ಯ ಮತ್ತುಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಕೃಷಿಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ನಿರ್ಮಲ ಅಂಬರೀಶ್‌, ಜಿಲ್ಲಾ ಪಂಚಾಯತ್‌ಉಪಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್‌ ಟೆಸ್ಟ್‌ ಹೆಚ್ಚಿಸಿ :

ಕೋವಿಡ್ ಎರಡನೇ ಅಲೆ ಕಂಡುಬರುವಮುನ್ಸೂಚನೆಯಿದ್ದು, ಕೋವಿಡ್‌ ಟೆಸ್ಟ್‌ಗಳನ್ನು ಹೆಚ್ಚಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ. ಕೋವಿಡ್‌ ಲಸಿಕೆ ಕುರಿತು ಜಾಗೃತಿ ಮೂಡಿಸಿ, ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು ಎಂದು ಆರೋಗ್ಯ ಇಲಾಖೆಯಅಧಿಕಾರಿಗಳಿಗೆ ಜಿಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಸೂಚಿಸಿದರು. ಯಾವುದೇ ಇಲಾಖೆಯ ಬಿಲ್‌ಗ‌ಳು ಲ್ಯಾಪ್ಸ್‌ ಆಗಿ ಹಣಸರ್ಕಾರಕ್ಕೆ ವಾಪಸ್ಸು ಹೋದರೆಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.

ಶಿಥಿಲ ಓವರ್‌ಹೆಡ್‌ ಟ್ಯಾಂಕ್‌ ಕೆಡವಿ :

ಜಿಪಂ ಸಿಇಒ ಎನ್‌.ಎಂ.ನಾಗರಾಜ್‌ ಮಾತನಾಡಿ, ತಾಲೂಕುಕಾರ್ಯನಿರ್ವಹಣಾಧಿ ಕಾರಿಗಳು ಗ್ರಾಪಂಗಳ ಕ್ರಿಯಾಯೋಜನೆ ಸಿದ್ಧಪಡಿಸುವಾಗ ಕುಡಿಯುವ ನೀರಿನ ಪೂರೈಕೆಮತ್ತು ಸಿಬ್ಬಂದಿ ಸಂಬಳಕ್ಕೆ ಸಾಕಷ್ಟು ಅನುದಾನ ಮೀಸಲಿಡಬೇಕು. 2019-20ನೇ ಸಾಲಿನ ಅನುದಾನದಲ್ಲಿ ಪೀಠೊಪಕರಣಗಳ ಸರಬರಾಜು ಆಗದೆ, ಹಣ ಪಾವತಿ ಮಾಡಿರುವ ಕ್ಷೇತ್ರಶಿಕ್ಷಣಾಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬೀಳುವ ಹಂತದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ಗಳನ್ನು ಕೆಡವುದರ ಮೂಲಕ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಿ ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next