Advertisement
ನಗದರ ಜಿಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಸಿಕ ಪ್ರಗತಿಯ ವರದಿ ಪಡೆದರು. 20 ಅಂಶಗಳ ಕಾರ್ಯಕ್ರಮ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದರು.
Related Articles
Advertisement
ಮಾಹಿತಿ ನೀಡಿ: ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಮಾತನಾಡಿ, ಅಧಿಕಾರಿಗಳು ಸಭೆಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಮುಂದಿನ ಸಭೆಯಲ್ಲಾದರೂ ಸೂಕ್ತವಾದ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಇತರರಿದ್ದರು.
164 ಕಾಮಗಾರಿಗಳು ಬಾಕಿ : 2019-20ನೇ ಸಾಲಿನಲ್ಲಿ ಮಳೆಯಿಂದ ಹಾನಿಯಾದ ಸರ್ಕಾರಿ ಪ್ರಾಥಮಿಕ ಶಾಲೆಗಳ ದುರಸ್ತಿಪಡಿಸುವ 418 ಕಾಮಗಾರಿಗಳಲ್ಲಿ 254 ಕಾಮಗಾರಿಗಳು ಮಾತ್ರವೇ ಪೂರ್ಣಗೊಂಡಿವೆ. 164 ಕಾಮಗಾರಿಗಳು ಬಾಕಿ ಉಳಿದಿವೆ. ಅವುಗಳಲ್ಲಿ113 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇನ್ನು28 ಕಾಮಗಾರಿಗಳನ್ನುಪಿಆರ್‌ಇಡಿ ಆರಂಭಿಸಿಯೇ ಇಲ್ಲ. ಜತೆಗೆ ಪಿಡಬ್ಲ್ಯೂಡಿ ನಿಂದ 334 ಶಾಲೆಗಳಲ್ಲಿ 635 ಕೊಠಡಿಗಳನ್ನು ದುರಸ್ತಿಪಡಿಸಬೇಕಿದ್ದು, 182 ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು,453ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಾರಂಭಿಸಿಯೇ ಇಲ್ಲ ಎಂದುಕೆ. ಪದ್ಮ ಸಿಇಒಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಅವರು ಪಿಆರ್‌ಇಡಿ ಅಧಿಕಾರಿಗಳಿಗೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ನವಣೆ ಬೆಳೆಗೆ ಮುಂದಾಗದ ರೈತರು : ಕಳೆದ ಮುಂಗಾರು ಹಂಗಾಮಿನಲ್ಲಿ 1550 ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದ ನವಣೆ ಬೆಳೆ ಶೂನ್ಯ ಸಾಧನೆ ಮಾಡಿದೆ.ಇದಕ್ಕೆಬಿತ್ತನೆಬೀಜದಪೂರೈಕೆಇಲ್ಲದಿರುವುದೇ ಕಾರಣ ಎಂದು ರೈತರು ಆರೋಪಿಸುತ್ತಿದ್ದಾರೆ ಎಂದು ಜಿಪಂ ಸಿಇಒ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶಪ್ಪ ರೈತಸಿರಿ ಯೋಜನೆ ಅಡಿಯಲ್ಲಿ ರೈತರಿಗೆ 10 ಸಾವಿರ ರೂ. ಸಹಾಯಧನ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಸಹಾಯ ಧನ ತಿರಸ್ಕಾರವಾಗಿದೆ. ಆದ್ದರಿಂದ ಬಿತ್ತನೆ ಬೀಜ ಪೂರೈಕೆಯಾದರೂ ಬೆಳೆ ಬೆಳೆಯಲು ರೈತರು ಮುಂದೆ ಬರುತ್ತಿಲ್ಲ ಎಂದರು. ಇನ್ನು ಕೇಂದ್ರ ಸರ್ಕಾರದಿಂದ ಕೇವಲ ಈಗಷ್ಟೇ 2.83 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೃಷಿ ಉಪಕರಣ ಮತ್ತು ಔಷಧಿಗಳನ್ನು ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದರು