Advertisement
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಿಂದ ಒಂದೇ ಕಾಮಗಾರಿಗಾಗಿ ಎರಡು ಇಲಾಖೆಗಳಿಂದ ಅನುದಾನ ಪಡೆದು, ಕೆಲಸ ಕೂಡಾ ಮಾಡದೇ ಇರುವಪ್ರಕರಣವನ್ನು ಬೆಳಕಿಗೆ ತರಲಾಯಿತು. ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿಸಮಿತಿ ಅಧ್ಯಕ್ಷ ಗುರುಶಾಂತಗೌಡ ಪಾಟೀಲ ಪ್ರಕರಣಪ್ರಸ್ತಾಪಿಸಿ, ಅಧಿಕಾರಿಗಳು ಭ್ರಷ್ಟಾಚಾರ ಎಸಗಿ ಸರ್ಕಾರಕ್ಕೆ ವಂಚಿಸಿರುವ ಕುರಿತು ದಾಖಲೆ ಸಮೇತ ಸಭೆಗೆ ವಿವರಿಸಿದರು.
Related Articles
Advertisement
ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಮಾತನಾಡಿ, ದಿನಕ್ಕೆ ಏಳು ಗಂಟೆ ವಿದ್ಯುಚ ಕ್ತಿ ಪೂರೈಸಲಾಗುವುದು. ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆ ಆಗಿರುವ ಹಿನ್ನೆಲೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೀರಾವರಿ ಬೇಸಾಯ ಕೈಗೊಂಡಿದ್ದಾರೆ. ಹೀಗಾಗಿ ಕೇವಲ ಏಳು ಗಂಟೆಯಷ್ಟೆ ವಿದ್ಯುತ್ ಪೂರೈಸಲು ಸಾಧ್ಯ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೋಭಾಸಿದ್ದು ಸಿರಸಗಿ ಮಾತನಾಡಿ, ಅಫಜಲಪುರ ತಾಲೂಕಿನ ಪ್ರವಾಹ ಸಂದರ್ಭದಲ್ಲಿ ಬಿದ್ದಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಬೇಕು. ಜನರು ಕರೆ ಮಾಡಿ ಕೇಳುತ್ತಿದ್ದಾರೆ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಜೆಸ್ಕಾಂ ಇಂಜಿನಿಯರ್ ಅವರು, ಅಫಜಲಪುರತಾಲೂಕಿನ ಬಿದ್ದಿದ ವಿದ್ಯುತ್ ಕಂಬಗಳನ್ನು ಶೇ. 72 ಕಾರ್ಯ ಮುಗಿದಿದೆ. ಸದ್ಯದಲ್ಲಿ ಎಲ್ಲ ಕಂಬಗಳನ್ನು ನೆಡಲಾಗುವುದು ಎಂದರು.
ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ವಿ. ಪಾಟೀಲ ಮಾತನಾಡಿ,ಚಿಂಚೋಳಿ ತಾಲೂಕಿನ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಮಸ್ಯೆಗಳ ಬಗ್ಗೆ ಸಭೆ ಗಮನಕ್ಕೆ ತಂದರು. ರೈತರು ತಮ್ಮ ಖರ್ಚಿನಲ್ಲಿ ಸೇಡಂಗೆ ವಾಹನಗಳಲ್ಲಿಹೋಗಿ ಟ್ರಾನ್ಸ್ ಫಾರ್ಮರ್ ತರಬೇಕಾಗಿದೆ ವಿಷಾದ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಇಂಜಿನಿಯರ್ ಚಿಂಚೋಳಿಯ ವಿದ್ಯುತ್ ಸಬ್ ಸ್ಟೇಶನ್‌ನಲ್ಲೇ ರೈತರಿಗೆ ಟ್ರಾನ್ಸ್‌ಫಾರ್ಮರ್ ಪೂರೈಕೆ ಮಾಡುವಂತೆ ತಿಳಿಸಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಪಿ. ರಾಜಾ ಮಾತನಾಡಿ, ಜಿಲ್ಲೆಯಲ್ಲಿ 126 ಶಾಲೆಗಳಲ್ಲಿವಿದ್ಯುತ್ ಪೂರೈಕೆಯಾಗಿಲ್ಲ. ಈ ಬಗ್ಗೆ ಕಳೆದಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ದಿಲೀಪ ಆರ್. ಪಾಟೀಲ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತಗೌಡ ಶಾಲಿವಾಹನ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕಿಶೋರ ಕುಮಾರ ದುಬ್ಬೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
ಜಿಲ್ಲೆಯಲ್ಲಿ ಒಟ್ಟು 2,92,089 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ 20,341, ಸಾವು 319, ಮನೆಯಲ್ಲಿ ವಾಸ 190, ಪದವಿ ಕಾಲೇಜು ಮಕ್ಕಳು ಹಾಗೂ ಸಿಬ್ಬಂದಿ ಸೇರಿ ಇಲ್ಲಿಯವರೆಗೆ 6,646 ಮಂದಿಗೆ ತಪಾಸಣೆ ಮಾಡಲಾಗಿದೆ. 11 ಮಂದಿಗೆ ಪಾಸಿಟಿವ್ ಬಂದಿದೆ. – ಡಾ| ರಾಜಶೇಖರ ಎಸ್. ಮಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ