Advertisement

KEA: ನಿಗಮ- ಮಂಡಳಿಗಳ ಹುದ್ದೆ ಭರ್ತಿಗೆ ಅ.28, 29 ಪರೀಕ್ಷೆ

12:18 AM Oct 21, 2023 | Team Udayavani |

ಬೆಂಗಳೂರು: ಕಿಯೋನಿಕ್ಸ್‌, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸಹಿತ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅ.28 ಮತ್ತು 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಲಿಂಕ್‌ ಬಿಡುಗಡೆ ಮಾಡಿದೆ.

Advertisement

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ ಇಂಟನ್ಯಾಷನಲ್‌ ಲಿಮಿಟೆಡ್‌, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಖಾಲಿ ಹುದ್ದೆಗಳಿಗೆ ಕೆಇಎ ಪರೀಕ್ಷೆ ನಡೆಸುತ್ತಿದೆ.

ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಡೌನ್ಲೋಡ್‌ ಆಗಿವೆ. ಕೆಲವರಿಗೆ ಅ.28 ಮತ್ತು 29 ಈ ಎರಡೂ ದಿನಾಂಕಗಳಂದು ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಅಂಥವರು ಎರಡೂ ಕಡೆ ಪರೀಕ್ಷೆ ಬರೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಸ್‌.ರಮ್ಯಾ ತಿಳಿಸಿದ್ದಾರೆ.

ಕೆಲವು ಅಭ್ಯರ್ಥಿಗಳಿಗೆ ಒಂದೇ ದಿನ ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್‌ ಆಗಿದೆ. ಅಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೊಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯತಕ್ಕದ್ದು. ಪರೀಕ್ಷಾ ದಿನದಂದು ಎರಡೂ ಪ್ರವೇಶಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಅವರು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next