Advertisement
ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ- ಈ 7 ಸಂಸ್ಥೆಗಳು ನೇಮಕಾತಿ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಕೋರಿಕೆ ಸಲ್ಲಿಸಿದ್ದವು. ಆ ಪ್ರಕಾರ ಸಂಕ್ಷಿಪ್ತ ಅಧಿಸೂಚನೆ ಕೂಡ ಹೊರಡಿಸಲಾಗಿತ್ತು. ಆದರೆ, ಈ ಸಂಸ್ಥೆಗಳು ವಿವಿಧ ಕಾರಣಗಳನ್ನು ನೀಡಿ ವಿವರವಾದ ಅಧಿಸೂಚನೆಗೆ ಸಮಯ ಕೋರಿರುವ ಕಾರಣಕ್ಕೆ ತಕ್ಷಣಕ್ಕೆ ಅರ್ಜಿ ಆಹ್ವಾನಿಸಲು ಸಾಧ್ಯವಾಗುತ್ತಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ನಡುವೆ ಒಳಮೀಸಲಾತಿ ಸಂಬಂಧ ತೀರ್ಮಾನ ಆಗುವವರೆಗೂ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಸರ್ಕಾರ ಅನುಮತಿ ಕೊಟ್ಟ ನಂತರ ಆದಷ್ಟು ಬೇಗ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದಿದ್ದಾರೆ.