Advertisement

KEA ಪರೀಕ್ಷಾ ಅಕ್ರಮ: ಸಿಐಡಿಗೆ ಹಸ್ತಾಂತರ

12:23 AM Nov 12, 2023 | Team Udayavani |

ಬೆಂಗಳೂರು: ಕಳೆದ ತಿಂಗಳು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ವಿವಿಧ ನಿಗಮ, ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಲಿಖೀತ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ ಎಸಗಿದ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

Advertisement

ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲು ಸಿಐಡಿ ಪೊಲೀಸ್‌ ಮಹಾನಿರ್ದೇಶಕ ಡಾ| ಎಂ.ಎ.ಸಲೀಂ ಸೂಚಿಸಿದ್ದಾರೆ. ಪ್ರಕರಣ ಕುರಿತು ಕಲಬುರಗಿ ನಗರ ಪೊಲೀಸ್‌ ಆಯುಕ್ತ ಚೇತನ್‌ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಯಾದಗಿರಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಗಳಿಂದ ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ. ಒಂದೆರಡು ದಿನಗಳಲ್ಲಿ ಇದುವರೆಗಿನ ಪ್ರಕರಣದ ತನಿಖೆಯ ಸಮಗ್ರ ಮಾಹಿತಿ ಸಿಗಲಿದೆ. ಅನಂತರ ಆರ್‌. ಡಿ.ಪಾಟೀಲ್‌, ಮಧ್ಯವರ್ತಿಗಳು ಹಾಗೂ ಅಭ್ಯರ್ಥಿಗಳು ಸಹಿತ ಎಲ್ಲ ಆರೋಪಿಗಳನ್ನು ಕೋರ್ಟ್‌ ಅನುಮತಿ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಇದೇ ವೇಳೆ, ಪಿಎಸ್‌ಐ ಮರು ಪರೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ| ಪರಮೇಶ್ವರ, ಆದಷ್ಟು ಬೇಗನೆ ಪರೀಕ್ಷೆ ನಡೆಸಿ, ನೇಮಕಾತಿ ಮಾಡಿಕೊಳ್ಳಬೇಕೆಂಬ ಅಪೇಕ್ಷೆ ಸರಕಾರಕ್ಕಿದೆ. ಓದಿಕೊಳ್ಳುವುದಕ್ಕೆ ಸಮಯ ಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next