Advertisement

KEA: ವೈದ್ಯಕೀಯ ಕೋರ್ಸ್‌ ನೋಂದಣಿಗೆ ಅಂತಿಮ ಅವಕಾಶ

12:07 AM Aug 17, 2024 | Team Udayavani |

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸುಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳಲು ಮತ್ತು ಯುಜಿ ನೀಟ್‌ ರೋಲ್‌ ನಂಬರನ್ನು ನಮೂದಿಸಲು ಆ. 19ರ ಬೆಳಗ್ಗೆ 10ರ ವರೆಗೆ ಮತ್ತೂಮ್ಮೆ ಅವಕಾಶ ನೀಡಲಾಗಿದೆ. ಇದು ಅಂತಿಮ ಅವಕಾಶವಾಗಿದ್ದು, ಅರ್ಹರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ತಿಳಿಸಿದೆ.

Advertisement

ಇದುವರೆಗೂ ನೀಡಿದ್ದ ಅವಕಾಶಗಳನ್ನು ಬಳಸಿಕೊಳ್ಳದೆ ಇರುವವರು ಆನ್‌ಲೈನ್‌ ಮೂಲಕ ನೋಂದಾಯಿಸಿ, ಶುಲ್ಕವನ್ನು ಪಾವತಿಸಬಹುದು. ಮಾಹಿತಿಗೆ ಪ್ರಾಧಿಕಾರದ ಜಾಲತಾಣವನ್ನು ನೋಡಬಹುದು ಎಂದು ಹೇಳಿದೆ.

ಇದೇ ರೀತಿಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ನಡೆದಿರುವ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗದಿದ್ದ ಎನ್‌ಆರ್‌ಐ/ವಿದೇಶಿ ವಿದ್ಯಾರ್ಥಿಗಳು ಮತ್ತು ಬೆಂಗಳೂರಿನ ಸೆಂಟ್‌ ಜಾನ್ಸ್‌ ಕಾಲೇಜಿನ ಕೆಟಗರಿ-2ರಿಂದ ಕೆಟಗರಿ-8ರ ವ್ಯಾಪ್ತಿಯ ವಿದ್ಯಾರ್ಥಿಗಳು ಆ.19ರ ಬೆಳಗ್ಗೆ 11ಕ್ಕೆ ಮೂಲ ಪ್ರಮಾಣಪತ್ರಗಳೊಂದಿಗೆ ಪ್ರಾಧಿಕಾರದ ಕಚೇರಿಗೆ ಹಾಜರಾಗಬೇಕು.

Advertisement

Udayavani is now on Telegram. Click here to join our channel and stay updated with the latest news.

Next