Advertisement
ಇತ್ತೀಚೆಗೆ ಕರ್ನಾಟಕ ಪರೀûಾ ಪ್ರಾಧಿಕಾರ (ಕೆಇಎ)ದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜ್ಯ ಸರಕಾರದ ಇತರ ಸಂಸ್ಥೆಗಳ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲು ಬ್ಲೂಟೂತ್ ನೀಡಿ ಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಹಾಗೂ ಆತನ 11 ಮಂದಿ ಸಹಚರರ ವಿರುದ್ಧ ಸಿಐಡಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ(ಕೋಕಾ)-2000 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Related Articles
Advertisement
ಆರ್.ಡಿ. ಪಾಟೀಲ್ ಮತ್ತು ತಂಡ ಈ ಹಿಂದೆ 545 ಪಿಎಸ್‌ಐ ಪರೀಕ್ಷೆ ಅಕ್ರಮ, ಲೋಕೋಪಯೋಗಿ ಇಲಾಖೆ ಪರೀಕ್ಷೆಗಳು, ನೀರಾವರಿ ಇಲಾಖೆ ಪರೀಕ್ಷೆಗಳು ಸೇರಿ ಕೆಇಎಯಿಂದ ನಡೆಸಿದ ಎಲ್ಲಾ ಪರೀಕ್ಷೆಗಳಲ್ಲೂ ಅಕ್ರಮ ಎಸಗಿದ್ದರು. ಈ ಹಿಂದೆ ಜಾಮೀನು ನೀಡಿದ್ದ ಕೋರ್ಟ್, ಮತ್ತೂಮ್ಮೆ ಇಂತಹ ಪ್ರಕರಣದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿತ್ತು. ಆದರೂ ಆರೋಪಿಗಳು ಅದೇ ಮಾದರಿಯ ಅಕ್ರಮದಲ್ಲಿ ತೊಡಗಿದ್ದಾರೆ. ಹೀಗಾಗಿ ಕೋಕಾ ಕಾಯ್ದೆ ಅಡಿ ಪ್ರಕರಣದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದರು.
ಏನಿದು ಕೋಕಾ ಕಾಯ್ದೆ?
ಗುಂಪು ಕಟ್ಟಿಕೊಂಡು ಸಂಘಟಿತ ರೂಪದಲ್ಲಿ ಪದೇ ಪದೇ ಒಂದೇ ಮಾದರಿಯ ಅಪರಾಧ ಪ್ರಕರಣಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಎಲ್ಲ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ(ಕೋಕಾ)-2000 ಅಡಿ ಪ್ರಕರಣ ದಾಖಲಿಸಲಾಗಿದೆ. ಅದರಿಂದ ಪೊಲೀಸರಿಗೆ 90 ದಿನಕ್ಕೆ ಸಲ್ಲಿಸುವ ಆರೋಪಪಟ್ಟಿಯನ್ನು 180 ದಿನದೊಳಗೆ ಸಲ್ಲಿಸುವ ಅವಕಾಶ ಸಿಗುತ್ತದೆ. ಜತೆಗೆ ಆರೋಪಿಗಳನ್ನು ಹೆಚ್ಚು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲು ಅವಕಾಶವಿದೆ. ಒಂದು ವೇಳೆ ಆರೋಪ ಸಾಬೀತಾದರೆ ಐದು ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಬಹುದು. ಜತೆಗೆ ಒಂದು ಲಕ್ಷದಿಂದ ಐದು ಲಕ್ಷ ರೂ.ಗೂ ಅಧಿಕ ದಂಡ ವಿಧಿಸುವ ಸಾಧ್ಯತೆಯಿದೆ.