Advertisement
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ನಡೆದ ಸಂಸ್ಮರಣ ದಿನಾಚರಣೆ – ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಅನುಗ್ರಹ ಸಂದೇಶವಿತ್ತರು.
Related Articles
Advertisement
ಏಕನಾಥ ಶೆಟ್ಟಿಯವರಿಗೆ ಶೌರ್ಯ ಪ್ರಶಸ್ತಿಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿಯನ್ನು ಭಾರತೀಯ ಭೂ ಸೇನೆಯ ನಿವೃತ್ತ ಯೋಧ, 2016ರಲ್ಲಿ ನಿಗೂಢವಾಗಿ ಕಣ್ಮರೆಯಾಗಿ ಇನ್ನೂ ಪತ್ತೆಯಾಗದ ಅಂಡಮಾನ್‌ಗೆ ತೆರಳುತ್ತಿದ್ದ ವಾಯುಸೇನೆಯ ವಿಮಾನದಲ್ಲಿದ್ದ ಸುಬೇದಾರ್ ಏಕನಾಥ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಅವರ ಪತ್ನಿ ಜಯಂತಿ ಶೆಟ್ಟಿ ಹಾಗೂ ಮಕ್ಕಳು ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ ಜಯಂತಿ ಶೆಟ್ಟಿ ಮಾತನಾಡಿ, ಕೆದಂಬಾಡಿ ರಾಮಯ್ಯ ಗೌಡ ಹಾಗೂ ನನ್ನ ಪತಿ ಏಕನಾಥ ಶೆಟ್ಟಿ ಇಬ್ಬರೂ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಏಕನಾಥ ಶೆಟ್ಟಿ ಅವರದ್ದು “ಪರಿಭಾವಿತ ಮರಣ’ ಎಂದು ಸೇನೆ ಹೇಳಿದೆ. ಅವರಿಲ್ಲದಿದ್ದರೂ ಮನೆಯಲ್ಲಿ ಅವರ ಶಿಲಾಪ್ರತಿಮೆ ನಿರ್ಮಿಸಿ ಅವರ ನೆನಪಿನಲ್ಲಿ ಬದುಕು ನಡೆಸುತ್ತಿದ್ದೇವೆ ಎಂದರು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ| ಶ್ರೀ ಧರ್ಮಪಾಲನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಉದ್ಘಾಟಿಸಿ ಶುಭ ಹಾರೈಸಿದರು. ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ. ತೀರ್ಥರಾಮ, ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲಸಾರ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ, ದ.ಕ. ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ತುಳುನಾಡ ರಕ್ಷಣ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಉಪಸ್ಥಿತರಿದ್ದರು. ಸಮಿತಿ ಅಧ್ಯಕ್ಷ ಎಂ.ಬಿ. ಕಿರಣ್ ಬುಡ್ಲೆಗುತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಸಂಚಾಲಕ ಭಾಸ್ಕರ್ ದೇವಸ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಪ್ರಶಸ್ತಿ ಪತ್ರ ವಾಚಿಸಿದರು. ಕೋಶಾಧಿಕಾರಿ ಶಿವರಾಮ ಗೌಡ ನಿನ್ನಿಕಲ್ ವಂದಿಸಿದರು. ಉಪಾಧ್ಯಕ್ಷ ಪಿ.ಎಚ್.ಆನಂದ್ ನೆರಿಯ, ಸಂಘಟನ ಕಾರ್ಯದರ್ಶಿ ಅಕ್ಷಯ್ ಕುರುಂಜಿ, ಚಂದ್ರ ಕೋಲ್ಚಾರ್, ಕುಶಾಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. ಸುಷ್ಮಿತಾ ಕಡಪಳ ನಿರೂಪಿಸಿದರು.