Advertisement
ಕಾಂಕ್ರೀಟ್ ರಸ್ತೆ ಕೂಡ ಸಂಪೂರ್ಣ ಕೆಸರಿನಿಂದ ಆವೃತ್ತವಾಗಿದೆ. ಈ ರಸ್ತೆಯು ಇದ್ಪಾಡಿ- ಮುಂಡಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಪ್ರತಿದಿನ ಈ ರಸ್ತೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ನಡೆದುಕೊಂಡು ಹೋಗುತ್ತಿದ್ದು, ಕೆಸರು ತುಂಬಿದ್ದರಿಂದ ತುಂಬಾ ತೊಂದರೆಯಾಗಿದೆ. ಮುಖ್ಯವಾಗಿ ಈ ರಸ್ತೆಯ ಇಕ್ಕೆಲಗಳಲ್ಲೂ ಮಳೆ ನೀರು ಹರಿದು ಹೋಗಲು ಕಣಿ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗಿದೆ. ಕಣಿ ವ್ಯವಸ್ಥೆ ಮಾಡಿದರೆ ಸಮಸ್ಯೆ ಪರಿಹಾರವಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ತತ್‌ಕ್ಷಣ ಗ್ರಾಮ ಪಂಚಾಯತ್ ಈ ಬಗ್ಗೆ ಗಮನ ಹರಿಸಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.