Advertisement

ಪರೀಕ್ಷಾ ಭದ್ರತೆ ಕುರಿತು ನಿಗಾ ವಹಿಸಿ

11:02 AM Mar 06, 2020 | Suhan S |

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಹೀಗಾಗಿ ಪರೀಕ್ಷಾ ಭದ್ರತೆ ಕುರಿತು ಹೆಚ್ಚಿನ ಗಮನ ಹರಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Advertisement

ಎಲ್ಲ ಪರೀಕ್ಷೆಗಳು ಸುಲಲಿತವಾಗಿ ಹಾಗೂ ಮುಕ್ತ ವಾತಾವರಣದಲ್ಲಿ ನಡೆಯವಂತೆ ಸರ್ಕಾರ ಎಲ್ಲ ರೀತಿಯ ಕ್ರಮ ಗಳನ್ನೂ ಕೈಗೊಂಡಿದೆ. ಇದಕ್ಕೆ ಪೊಲೀಸ್‌ ಇಲಾಖೆ, ಖಜಾನೆ, ಗುಪ್ತಚಾರ ಸೇರಿ ಎಲ್ಲ ಇಲಾಖೆಗಳೂ ಸಹಕರಿಸಿದ್ದು, ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿವೆ. ಪರೀಕ್ಷೆಗಳು ಸುಸೂತ್ರವಾಗಿ ನಿರ್ವಹಣೆಯಾಗಬೇಕಾದ ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಆಶಯಗಳು ಸಾಕಾರಗೊಳ್ಳಬೇಕಾದರೆ ಜಿಲ್ಲಾಧಿಕಾರಿಗಳ ಜವಾಬ್ದಾರಿ ಹಿರಿದಾಗಿದೆ. ಈ ಕುರಿತಂತೆ ಪರೀಕ್ಷಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಎಲ್ಲ ಅಧಿಕಾರಿ, ಸಿಬ್ಬಂದಿ ಅತಿ ಜಾಗರೂಕತೆಯಿಂದ ಮತ್ತು ಹೆಚ್ಚಿನ ಜವಾಬ್ದಾರಿಯಿಂದ ತೊಡಗಿಸಿಕೊಂಡು ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯುವಂತೆ ಹೆಚ್ಚಿನ ಗಮನ ಹರಿಸಲು ಪತ್ರದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

2ನೇ ದಿನ ಒಂದೂ ಡಿಬಾರ್‌ ಇಲ್ಲ! :  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಎರಡನೇ ದಿನ ಯಾವುದೇ ಡಿಬಾರ್‌ ಆಗಿಲ್ಲ. ಯಾವುದೇ ರೀತಿಯ ಗೊಂದಲವೂ ಇಲ್ಲದೇ ಪರೀಕ್ಷೆ ಶಾಂತಿಯುತವಾಗಿ ನಡೆದಿದೆ. ತಮಿಳು ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 313 ವಿದ್ಯಾರ್ಥಿಗಳಲ್ಲಿ 14, ತೆಲುಗು ವಿಷಯಕ್ಕೆ ನೋಂದಾಯಿಸಿ ಕೊಂಡಿದ್ದ 152 ವಿದ್ಯಾರ್ಥಿಗಳಲ್ಲಿ 7, ಮಲಯಾಳಂ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 52ರಲ್ಲಿ ಓರ್ವ, ಮರಾಠಿ ವಿಷಯಕ್ಕೆ ನೋಂದಣಿ ಮಾಡಿಕೊಂಡಿದ್ದ 2369 ವಿದ್ಯಾರ್ಥಿಗಳಲ್ಲಿ 176 ಹಾಗೂ ಅರೇಬಿಕ್‌ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 408ರಲ್ಲಿ 17 ಮತ್ತು ಫ್ರೆಂಚ್‌ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 2768 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪಿಯು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next