ಗೋಣಿಕೊಪ್ಪಲು: ದೇಶಕ್ಕಾಗಿ ಪಕ್ಷ ಎಂಬುದನ್ನು ನೆನಪಿನಲ್ಲಿಟ್ಟು ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ನೋದಾಯಿಸಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯಅವರು ಬಿಜೆ ಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೌಲ್ಯಗಳ ಮತ್ತು ಸಿದ್ಧಾಂತಗಳಿಂದ ಚುನಾವಣೆ ಗೆಲ್ಲುವು ಸಾಧಿಸಬಹುದು. ದೇಶದಲ್ಲಿ ಬದಲಾವಣೆ ತರಲು ಪಕ್ಷದ ಅಗತ್ಯ ಇದೆ. ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷವನ್ನು ಕೌಟುಂಬಿಕ ವಾತಾವರಣವಾಗಿ ನಿರ್ಮಿಸಿದರೆ ಪಕ್ಷ ಸದೃಢವಾಗುತ್ತದೆ. ಈ ಮೂಲಕ ದೇಶಕ್ಕೆ ಉತ್ತಮ ನಾಯಕನನ್ನು ನೀಡಿ ದೇಶದಲ್ಲಿ ಶಾಂತಿ ನೆಲೆಸುವ ವಾತವರಣ ನಿರ್ಮಿಸಬಹುದು. ಇದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ ಎಂದು ಶಿಕ್ಷಕರ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು.
ಸದಸ್ಯತ್ವ ಅಭಿಯಾನದ ಜಿಲ್ಲಾ ಉಸ್ತುವಾರಿ ಶಾಂತೆಯಂದ ರವಿಕುಶಾಲಪ್ಪ ಮಾತನಾಡಿ ರಾಜ್ಯದಲ್ಲಿ ನೂತನವಾಗಿ ಸುಮಾರು 53 ಲಕ್ಷಕ್ಕೂ ಹೆಚ್ಚು ಸದಸ್ಯರು ಭಾರತೀಯ ಜನತಾ ಪಕ್ಷಕ್ಕೆ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿಯಾನದ ಮೂಲಕ 43 ಸಾವಿರ ಸದಸ್ಯರು ಸೇರ್ಪಡೆಗೊಂಡಿದ್ದು, ಅಭಿಯಾನ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ ಕುಶಾಲಪ್ಪನವರು ಪ್ರತಿಯೊಬ್ಬ ಮತದಾರರನ್ನು ಸದಸ್ಯರಾಗಿ ಪರಿವರ್ತಿಸಲು ಕಾರ್ಯಕರ್ತರು ಮುಂದಾಗಬೇಕು. ನಿರ್ಲಕ್ಷ್ಯ, ವೈಯಕ್ತಿಕ ರಾಜಕೀಯ ವೈಮಸ್ಯಗಳನ್ನು ಬಿಟ್ಟು ದೇಶಕ್ಕಾಗಿ ಎಂಬ ಮನೋಭಾವನೆಯನ್ನು ಹೊಂದಿ ಪಕ್ಷವನ್ನು ಸಂಘಟನೆ ಮಾಡುವ ಕಾರ್ಯದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನ ಮನದಲ್ಲಿ ದೃಢ ಹೊಂದಬೇಕು ಎಂದು ಸಲಹೆ ನೀಡಿದರು.
ಸದಸ್ಯತ್ವ ಅಭಿಯಾನ ಜಿಲ್ಲಾ ಸಂಚಾಲಕ ನಾಪಂಡ ರವಿಕಾಳಪ್ಪ ಮಾತನಾಡಿ ಮುಂದಿನ ಚುನಾವಣೆಗೆ ಸದಸ್ಯತ್ವ ಅಭಿಯಾನದಿಂದ ಪರಿಣಾಮ ಬೀರಲಿದೆ. ಹೆಚ್ಚಿನ ಸದಸ್ಯರು ಹೊಂದಿದಂತೆ ಪಕ್ಷ ಬಲ ಹೊಂದುತ್ತದೆ ಎಂದು ತಿಳಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ಮಾತನಾಡಿ ಸದಸ್ಯತ್ವ ಅಭಿಯಾನವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತಮಗೆ ನೀಡಿರುವ ಪುಸ್ತಕದಲ್ಲಿ ಯಾವುದೇ ಲೋಪವಿಲ್ಲದಂತೆ ಸದಸ್ಯರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ನಮೂದಿಸಿ ಪುಸ್ತಕಗಳನ್ನು ಶೀಘ್ರವೇ ಹಿಂದಿರುಗಿಸಿ ಎಂದು ಸೂಚಿಸಿದರು.
ರಾಜ್ಯ ಬಿಜೆಪಿ ಸದಸ್ಯೆ ರೀನಾ ಪ್ರಕಾಶ್, ತಾಲ್ಲೂಕು ಸದಸ್ಯತ್ವ ಅಭಿಯಾನದ ಸಂಚಾಲಕರಾದ ನೆಲ್ಲೀರ ಚಲನ್, ಗುಮ್ಮಟ್ಟಿàರ ಕಿಲನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನಾ ಚಂಗಪ್ಪ, ತಾಲೂಕು ಕಾರ್ಯದರ್ಶಿ ಲಾಲಾ ಭೀಮಯ್ಯ ಉಪಸ್ಥಿತರಿದ್ದರು.