ದೇವನಹಳ್ಳಿ: ಸಾರ್ವಜನಿಕರು ನೀರಿನ ತೊಟ್ಟಿ ಗಳನ್ನು ತೆರದಿಡಬಾರದು. ಮುಚ್ಚಳ ಮುಚ್ಚಿ ಸಂಗ್ರ ಹಿಸಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಂಡು ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿ ಕೊಳ್ಳಬೇಕೆಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ತಿಳಿಸಿದರು.
ನಗರದ ಬಿಬಿ ರಸ್ತೆಯಲ್ಲಿರುವ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಡೆಂಘೀ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.
ಸೂಕ್ತ ಚಿಕಿತ್ಸೆ ಪಡೆಯಿರಿ: ಡೆಂಘೀ ಜ್ವರ ಬರದಂತೆ ಸಾರ್ವಜನಿಕರು ಮುಂಜಾಗೃತ ಹಾಗೂ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಡೆಂಘೀ ಜ್ವರದ ವೈರಸ್‌ನಿಂದ ಉಂಟಾಗುವ ಖಾಯಿಲೆ ಈಡೀಸ್ ಈಜಿಪ್ಟೆ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಸಾಮಾನ್ಯವಾಗಿ ಸ್ವಚ್ಛ ನೀರಿನಿಂದ ಸಂತಾನ ಅಭಿವೃದ್ಧಿ ಮಾಡುತ್ತದೆ. ಹಗಲು ಹೊತ್ತಿನಲ್ಲಿ ಮನುಷ್ಯನನ್ನು ಕಚ್ಚುತ್ತದೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಹಾಗೂ ಕೀಳುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ತಕ್ಷಣ ಆರೋಗ್ಯ ಕಾರ್ಯಕರ್ತೆಯರನ್ನು ಸಂಪ ರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಸ್ವಚ್ಛತೆಗೆ ಆದ್ಯತೆ ನೀಡಿ: ಡೆಂಘೀ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣ ತಡೆಗಟ್ಟಲು ಅಗತ್ಯವಿರುವ ಜಾಗೃತಿ ಕಾರ್ಯಕ್ರಮಗಳಿಗೆ ಸಹಕಾರ ನೀಡಲಾ ಗುತ್ತಿದೆ. ನೀರು ನಿಲ್ಲದಂತೆ ಹಾಗೂ ಚರಂಡಿ ಇತ್ಯಾದಿ ಕಡೆ ಸೊಳ್ಳೆಗಳ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಪರಿಸರ ಸಂರಕ್ಷಣೆ ಅಗತ್ಯ: ತಾಲೂಕು ಆರೋಗ್ಯಾಧಿಕಾರಿ ಸಂಜಯ್ ಮಾತನಾಡಿ, ತಾಲೂ ಕಿನಲ್ಲಿ ಡೆಂಘೀ ಮತ್ತು ಚಿಕೂನ್‌ಗುನ್ಯಾ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡ ಲಾಗುತ್ತಿದೆ. ಪ್ರತಿಯೊಬ್ಬರಲ್ಲೂ ಸ್ವಚ್ಛತೆ ಬಗ್ಗೆ ಅರಿವು ಮೂಡಬೇಕು. ಪ್ರತಿಯೊಂದು ಕಡೆ ಪರಿಸರ ಸಂರ ಕ್ಷಣೆ ಬಗ್ಗೆ ಜಾಗೃತಿ ಮೂಡಿದಾಗ ಮಾತ್ರ ಸಾಂಕ್ರಾ ಮಿಕ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರೇವಣ್ಣ ಮಾತನಾಡಿ, ಸೊಳ್ಳೆ ಪರದೆ ಉಪಯೋಗಿಸಿಕೊಳ್ಳ ಬೇಕು. ವಾರದಲ್ಲಿ ಒಂದು ದಿನ ಒಣ ದಿನ ಆಚರಿ ಸಬೇಕು. ಸೊಳ್ಳೆಗಳ ಉತ್ಪತ್ತಿ ಮೂಲವನ್ನು ನಾಶ ಮಾಡಬೇಕು ಎಂದರು.
ವಾರಕ್ಕೊಮ್ಮೆಯಾದರೂ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಛವಾಗಿ ತೊಳೆದು ನೀರು ಸಂಗ್ರಹಿಸಿ ಮುಚ್ಚಳ ಮುಚ್ಚಬೇಕು. ಶುದ್ಧ ನೀರಿನಲ್ಲಿ ಸೊಳ್ಳೆಗಳು ಸಂತತಿ ಮಾಡುವುದರಿಂದ ತೆರೆದ ಪರಿಕರಗಳಲ್ಲಿ ನೀರು ಸಂಗ್ರಹಿಸಬಾರದು. ಡೆಂಘೀ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಸಾರ್ವಜ ನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು. ಹಠಾತ್ತನೆ ಜ್ವರ, ತೀವ್ರ ತಲೆನೋವು ಕಾಣಿಸಿಕೊಂಡರೆ ತಕ್ಷಣ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳ ಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತಿತರರು ಭಾಗವಹಿಸಿದ್ದರು.