Advertisement

ನರೇಗಾ ಸದ್ಬಳಕೆ ಮಾಡಿಕೊಳ್ಳಿ: ರಾಜಣ್ಣ

04:38 PM Apr 19, 2020 | Suhan S |

ಚನ್ನಪಟ್ಟಣ: ಲಾಕ್‌ಡೌನ್‌ನಲ್ಲೇ ನರೇಗಾ ಯೋಜನೆಯಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿ ಮಾಡಬಹುದಾಗಿದೆ. ಜನರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಎಚ್‌. ರಾಜಣ್ಣ ಕರೆ ನೀಡಿದರು.

Advertisement

ತಾಪಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಮ್ಮ ಉದ್ಯೋಗ ನಮ್ಮ ಗ್ರಾಮದಲ್ಲೇ, ನಮ್ಮ ಗ್ರಾಮ ಅಭಿವೃದ್ಧಿ, ನಮ್ಮ ಕೈಯಲ್ಲೇ,, ಕಾರ್ಯಕ್ರಮದಡಿ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ನಡೆಸಲು ಅವಕಾಶ ನೀಡಲಾಗಿದೆ. ತಮ್ಮ ಗ್ರಾಮದಲ್ಲೇ ಅಂತರ ಕಾಪಾಡಿಕೊಂಡು ಕೆಲಸ ನಿರ್ವಹಿಸಬಹುದು. ನರೇಗಾ ಯೋಜನೆಯಡಿ ಕನಿಷ್ಠ 100 ದಿನಗಳ ಉದ್ಯೋಗ ಪಡೆಯಬಹುದಾಗಿದೆ ಎಂದರು.

ತಾಪಂ ಇಒ ಚಂದ್ರ ಮಾತನಾಡಿ, ವಿವಿಧ ಇಲಾಖೆಗಳ ಮೂಲಕ ನರೇಗಾ ಯೋಜನೆಯಡಿ ಕೆಲಸ ಮಾಡಬಹುದಾಗಿದೆ. ರೇಷ್ಮೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಸೇರಿದಂತೆ ನರೇಗಾ ಯೋಜನೆಗೆ ಒಳಪಡುವ ಕೆಲಸ ನಿಗದಿಪಡಿಸಿರುವ ಮಂದಿ ಬಳಸಿ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೆಲಸ ನಿರ್ವಹಿಸಬಹುದು ಎಂದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿದ್ಧರಾಜು ಹಾಗೂ ತಾಪಂ ಸಿಬ್ಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next