Advertisement
ತಾಲೂಕಿನ ಚಂದಕವಾಡಿಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲಾ ಅವರಣದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಚಂದಕವಾಡಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಮೇವ ಜಯತೇ ಮತ್ತು ಜಲಾಮೃತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಜಲಮರುಪೂರಣ ಘಟಕ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಲತಾಕುಮಾರಿ ಮಾತನಾಡಿ, ಮನುಷ್ಯನಿಗೆ ನೀರು ಅತ್ಯಾವಶ್ಯಕವಾಗಿ ಬೇಕು. ನೀರಿನ ಪ್ರಾಮುಖ್ಯತೆ ಅರಿಯಬೇಕು. ಜನತೆ ನೀರಿನ ಬಗ್ಗೆ ಸಾಕ್ಷರತೆ ಹೊಂದಬೇಕು. ನೀರಿನ ಸದ್ಭಳಕೆ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 1950 ಕಡೆ ಜಲಮರುಪೂರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಚರಂಡಿ ನಿರ್ವಹಣೆ ಮಾಡಿ: ಸ್ವಚ್ಛ ಮೇವ ಜಯತೇ ಕಾರ್ಯಕ್ರಮದ ಅಂಗವಾಗಿ ಶಾಲೆಗಳಲ್ಲಿ ಚರ್ಚಾಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ಅದರಲ್ಲಿ ಸ್ವಚ್ಛತೆ ಮತ್ತು ನೀರಿನ ಸದ್ಭಳಕೆ ವಿಷಯಗಳಿಗೆ ಪ್ರಥಮಾದ್ಯತೆ ನೀಡಬೇಕು. ಶಾಲಾ ಅವರಣದಲ್ಲಿ ಕಸದ ಬುಟ್ಟಿಗಳನ್ನಿಡಬೇಕು. ಗ್ರಾಮಗಳ ಸ್ವಚ್ಛತೆ ಬರೀ ಸರ್ಕಾರದ ಕೆಲಸವಲ್ಲ. ಅದರಲ್ಲಿ ಜನರ ಸಹಭಾಗಿತ್ವ ಇರಬೇಕು. ಚರಂಡಿಗಳಲ್ಲಿ ಕಸವನ್ನು ಹಾಕದೇ ಸೂಕ್ತವಾದ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಬಯಲು ಶೌಚ ಮಾಡದಿರಿ: ಗ್ರಾಮಗಳು ಪ್ಲಾಸ್ಟಿಕ್ ಮುಕ್ತವಾಗುವ ಹಾದಿಯಲ್ಲಿ ಪ್ಲಾಸ್ಟಿಕ್ ಅನ್ನು ಬಳಸಿದರೆ ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಬಯಲು ಶೌಚ ಮಾಡಲೇಬಾರದು. ಅದು ಅನೇಕ ರೋಗರುಜಿನಗಳ ಹರಡುತ್ತದೆ. ಸ್ವಚ್ಛ ಪರಿಸರದ ಸಂಸ್ಕೃತಿ ನಮ್ಮದಾಗಲೂ ಪ್ರತಿಯೊಬ್ಬರು ಕಟಿಬದ್ಧರಾಗಬೇಕು ಎಂದು ಹೇಳಿದರು.
ಚಂದಕವಾಡಿ ಗ್ರಾಮಪಂಚಾಯಿತಿ ಅಧ್ಯಕ್ಷ ಸಿದ್ಧಪ್ಪಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹನುಮನರಸಯ್ಯ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ, ಸದಸ್ಯರಾದ ಎಚ್.ವಿ. ಚಂದ್ರು, ದೊಡ್ಡತಾಯಮ್ಮ, ಮಹದೇವಶೆಟ್ಟಿ, ಚಂದಕವಾಡಿ ಗ್ರಾ.ಪಂ. ಸದಸ್ಯರಾದ ನಾಗನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷಿ¾àಪತಿ ಇತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸ್ವಚ್ಛ ಮೇವ ಜಯತೇ ಹಾಗೂ ಜಲಾಮೃತ ಕಾರ್ಯಕ್ರಮಗಳ ಭಿತ್ತಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಲೆ ನಟರಾಜು ಪರಿಸರ ಗೀತೆಗಳನ್ನು ಹಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಚಂದಕವಾಡಿಯ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಸಾಕ್ಷರತಾ ರಥಕ್ಕೆ ಹಾಗೂ ಮೆರವಣಿಗೆಗೆ ಜಿಲ್ಲಾ ಪ್ರಧಾನ ಹಾಗೂ
-ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶೆ ಸಿ.ಜೆ. ವಿಶಾಲಾಕ್ಷಿ ಅವರು ಹಾಜರಿದ್ದರು. ನಂತರ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲಾ ಅವರಣದಲ್ಲಿ ಗಿಡಗಳನ್ನು ನೆಟ್ಟು ನೀರೆರದರು.