Advertisement

ನೀರು-ಮೇವು ಕೊರತೆಯಾಗದಂತೆ ನೋಡಿಕೊಳ್ಳಿ

11:32 AM Nov 25, 2018 | |

ವಿಜಯಪುರ: ಜಿಲ್ಲೆಯಲ್ಲಿ ತೀವೃ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಬರ ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಲಾತ್ತಿರುವ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ತಾಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಂತೆ ತಾಲೂಕು ಮಟ್ಟದಲ್ಲಿ ಬರ ನಿರ್ವಹಣ ಕಾರ್ಯಗಳ ಬಗ್ಗೆ ಪರಿಶೀಲಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 67 ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು ಖಾಸಗಿ ಬೋರ್‌ವೆಲ್‌ಗ‌ಳ ಸದ್ಬಳಕೆ ಹಾಗೂ ಪೈಪ್‌ ಲೈನ್‌ಗಳ ಮೂಲಕ ನೀರು ಸರಬರಾಜು ಕುರಿತಂತೆ ಕ್ರಿಯಾ ಯೋಜನೆಗಳನ್ವಯ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮ, ಟಾಸ್ಕ್ ಪೋರ್ಸ್‌ ಸಮಿತಿ ಹಾಗೂ ಈವರೆಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು, ವಿವಿಧ ಗ್ರಾಮಳಲ್ಲಿ ಯಾವ ಕಾರಣಗಳಿಂದ ನೀರು ಪೂರೈಕೆ ನಿಲ್ಲಿಸಿರುವ ಬಗ್ಗೆ ಸಕಾರಣದ ವರದಿ ಸಲ್ಲಿಸಬೇಕು. ಹೊರ ರಾಜ್ಯಗಳಿಗೆ ಮೇವು ಸರಬರಾಜು ಆಗದಂತೆ ಎಚ್ಚರಿಕೆ ವಹಿಸಬೇಕು. 

ಮುಂದಿನ ದಿನಗಳಲ್ಲಿ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಮೇವು ಬ್ಯಾಂಕ್‌ ಸ್ಥಾಪನೆ ಹಾಗೂ ಗೋಶಾಲೆಗಳ ಬಗ್ಗೆ ಸೂಕ್ತ ವರದಿ ಸಲ್ಲಿಸಬೇಕು.

ರೈತರ ಆತ್ಮಹತ್ಯೆ ಪ್ರಕರಣಗಳಿಗೆ ನೀಡಲಾದ ಪರಿಹಾರದ ಬಗ್ಗೆ ಮಾಹಿತಿ ಒದಗಿಸಬೇಕು. ಒಟ್ಟಾರೆ ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ವಿವಿಧ ಕೆರೆಗಳ ಭರ್ತಿಗೆ ಕ್ರಮಗಳನ್ನು ಕೈಗೊಳ್ಳಬೇಕು. ತಹಶೀಲ್ದಾರ್‌ರು, ತಾಪಂ ಇಒಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರರು, ಪಶು ಸಂಗಸೋಪನಾ ಇಲಾಖೆ ಮತ್ತು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ
ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ವಿಕಾಸ ಸುರಳಕರ, ಅಪರ ಜಿಲ್ಲಾಧಿಕಾರಿ ಪ್ರಸನ್ನ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

ಸಕಾಲಕ್ಕೆ ಕಬ್ಬು ಬಿಲ್‌ ಪಾವತಿಸಿ
ವಿಜಯಪುರ: ಕಬ್ಬು ಬೆಳೆ ರೈತರಿಗೆ ಪ್ರಸಕ್ತ ಸಾಲಿಗೆ ಬರುವ ಕಬ್ಬಿಗೆ ಸಂಬಂಧಪಟ್ಟಂತೆ ಆದಷ್ಟು ಬೇಗ ಬಿಲ್‌ ಪಾವತಿ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಜಿಲ್ಲೆಯ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕಬ್ಬು ಬೆಳೆಗಾರ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಕಳೆದ ಸಾಲಿನಲ್ಲಿ ಎಫ್‌ ಆರ್‌ಪಿ ದರದನ್ವಯ ಎಲ್ಲ ರೈತರ ಬಿಲ್‌ಗ‌ಳನ್ನು ಪಾವತಿ ಮಾಡಲಾಗಿದ್ದು ಪ್ರಸಕ್ತ ವರ್ಷವೂ ಕೂಡ ರೈತರ ಕಬ್ಬಿಗೆ ನಿಗದಿತ ದರದನ್ವಯ ಬಿಲ್‌ ಪಾವತಿ ಮಾಡಲು ಸಲಹೆ ನೀಡಿದರು.

ಆಯಾ ಸಕ್ಕರೆ ಕಾರ್ಖಾನೆ ಮಾಲೀಕರು ಯಾವುದೇ ಸಂದರ್ಭದಲ್ಲಿ ರೈತರಿಗೆ ಸಮಸ್ಯಯಾಗದಂತೆ ನೋಡಿಕೊಳ್ಳಬೇಕು. ಕಬ್ಬಿಗೆ ಸಂಬಂಧಿಸಿದಂತೆ ಡಿಜಿಟಲ್‌ ವೇಯಿಂಗ್‌ ಮಷಿನ್‌ ಮೂಲಕವೆ ಕಬ್ಬು ತೂಕ ಮಾಡಬೇಕು. ಕಾನೂನು ಮಾಪನ ಶಾಸ್ತ್ರ ಇಲಾಖೆ ಮೂಲಕ ಕಾಲ ಕಾಲಕ್ಕೆ ತಮ್ಮ ವಿಚಕ್ಷಣಾ ಅಧಿಕಾರಿಗಳ ಮೂಲಕ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆಯನ್ನು ಸಹ ಮಾಡುವಂತೆ ಸೂಚಿಸಿದರು.

ರೈತರ ಬೇಡಿಕೆಯನ್ವಯ ನೂತನ ಮಾದರಿ ಕಬ್ಬು ತಳಿ ಜೊತೆಗೆ ಗುಣಮಟ್ಟದ ರಸಗೊಬ್ಬರವನ್ನು ಸಹ ಪೂರೈಕೆಗೂ ಕಾರ್ಖಾನೆ ಮಾಲೀಕರು ಒಪ್ಪಿಕೊಂಡಿದ್ದು ಆಯಾ ಕಾರ್ಖಾನೆಗಳಲ್ಲಿ ಎಫ್‌ ಆರ್‌ಪಿ (ಫೇರ್‌ ಆಂಡ್‌ ರೆಮ್ಯೂನರೇಟಿವ್‌) ನ್ಯಾಯ ಮತ್ತು ಲಾಭದಾಯಕ ಬೆಲೆ, ರಿಕವರಿ ಕುರಿತಂತೆ ಸೂಚನಾ ಫಲಕದಲ್ಲಿ ಮಾಹಿತಿ ಅಳವಡಿಸಿ ರೈತರಿಗೆ ನೆರವಾಗುವಂತೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಸೂಚನೆ ನೀಡಿದರು.

ರೈತರು ಸಹ ನಿರಂತರವಾಗಿ ಕಬ್ಬು ಬೆಳೆಗೆ ಮೊರೆ ಹೋಗುವುದರಿಂದ ಜಮೀನಿನ ಫಲವತ್ತತೆ ಕುಂಠಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರೂ ಸಹ ಮಿಶ್ರ ಬೆಳೆ ಬೆಳೆಯಲು ಮುಂದಾಗಬೇಕು. ಕೃಷಿ ಇಲಾಖೆ ಅಧಿಕಾರಿಗಳು ಕೂಡ ರೈತರಿಗೆ ಕೃಷಿ ಮಹಾವಿದ್ಯಾಲಯಗಳ ಮೂಲಕ ತರಬೇತಿ ಕಾರ್ಯಾಗಾರ ಆಯೋಜಿಸಿ ವಿವಿಧ ಋತುಮಾನಗಳಲ್ಲಿ ಕೈಗೊಳ್ಳಬೇಕಾದ ಬೆಳೆಗಳ ಮಾಹಿತಿ, ವಿವಿಧ ತಳಿಗಳ ಮಾಹಿತಿ, ರಸಗೊಬ್ಬರಗಳ ಬಳಕೆ ಕುರಿತು ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ
ನೀಡಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಜಿಲ್ಲೆಯ 9 ಕಾರ್ಖಾನೆಗಳ ಮಾಲೀಕರು, ರೈತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next