Advertisement
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ವಾಸಿ ನಾಗಭೂಷಣ (30) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸಿವಿಲ್ ಗುತ್ತಿಗೆದಾರನಾಗಿದ್ದ ಈತ ಸೋಮವಾರ ಮಧ್ಯಾಹ್ನ ವಿಷದ ಬಾಟಲಿ ಯೊಂದಿಗೆ ಪಟ್ಟಣದ ಕ್ರೀಡಾಂಗಣಕ್ಕೆ ತೆರಳಿದ್ದ. ಮೊಬೈಲ್‌ನಲ್ಲಿ ಫೇಸ್‌ಬುಕ್ ಆನ್ ಮಾಡಿಕೊಂಡು ಸ್ನೇಹಿತರಿಗೆ ವಿಷಯ ತಿಳಿಸಿದ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಷ ಸೇವಿಸಿದ. ಇದನ್ನು ನೋಡುತ್ತಿದ್ದ ಸ್ನೇಹಿತರು ಕೂಡಲೇ ಸ್ಥಳಕ್ಕೆ ಆಗಮಿಸಿ, ನಾಗಭೂಷಣನನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈತ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ ಎನ್ನಲಾ ಗುತ್ತಿದೆ. ಆದರೆ, ಈ ಕುರಿತು ಪೊಲೀಸ್ ಪ್ರಕರಣ ದಾಖಲಾಗಿಲ್ಲ.