ವಾರ, ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ. ಬಿಡುಗಡೆಗೆ ಮನವಿ ಮಾಡಿ, ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.
Advertisement
ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್, ಮಂಗಳವಾರ ದಿಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸ ಬೇಕೆಂದು ಆಗ್ರಹಿಸಿದ್ದರು.
ತಮ್ಮ ಇ.ಡಿ. ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿ, ಕೇಜ್ರಿವಾಲ್ ಅವರನ್ನು ಇ.ಡಿ. ಬಂಧಿಸಿರುವುದು ಸರಿಯಾಗಿದೆ ಎಂದು ಹೇಳಿತ್ತು. ಹಲವು ಸಮನ್ಸ್‌ಗಳನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ತನಿಖೆಗಾಗಿ ಅವರನ್ನು ಬಂಧಿಸದೇ ಬೇರೆ ಆಯ್ಕೆ ಇರಲಿಲ್ಲ ಎಂದು ನ್ಯಾ| ಸ್ವರ್ಣಕಾಂತ ಶರ್ಮಾ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಇತರರೊಂದಿಗೆ ಈ ಹಗರಣದ ಸಂಚುಕೋರರು. ದಕ್ಷಿಣದ ಗುಂಪಿನಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿರುವುದು ದಾಖಲೆಗಳು ಹೇಳುತ್ತವೆ ಎಂದು 106 ಪುಟಗಳ ತೀರ್ಪಿನಲ್ಲಿ ತಿಳಿಸಲಾಗಿದೆ. ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಕೇಜ್ರಿವಾಲ್ ಅವರನ್ನು ಇ.ಡಿ. ಮಾ.21ರಂದು ಬಂಧಿಸಿತ್ತು.
Related Articles
ಮತ್ತೊಂದೆಡೆ, ತನ್ನ ನ್ಯಾಯವಾದಿಗಳನ್ನು ಭೇಟಿಯಾಗಲು ಹೆಚ್ಚಿನ ಸಮಯ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ಕೋರ್ಟ್ ತಳ್ಳಿ ಹಾಕಿ, ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗುತ್ತದೆ ಎಂದು ಹೇಳಿದೆ. ಮನವಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಕಾವೇರಿ ಬವೇಜಾ, ಅರ್ಜಿದಾರರಿಗೆ ಕಾನೂನುಬದ್ಧವಾಗಿ ನೀಡಲಾದ ಅವಧಿಗಳನ್ನು ಬಳಸಿಕೊಳ್ಳುತ್ತಿಲ್ಲ. ಅವರು ಬೇರೆ ಉದ್ದೇಶಕ್ಕೆ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆಂಬ ಸಂಗತಿಯನ್ನು ಇಡಿ ಕೋರ್ಟ್ ಗಮನಕ್ಕೆ ತಂದಿದೆ ಎಂದು ಹೇಳಿದರು.
Advertisement
ಜೈಲು ಅಧಿಕಾರಿಗಳ ಮೇಲೆ ಒತ್ತಡ: ಸಂಜಯ್ ಸಿಂಗ್ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಜತೆಗಿನ ಬಂಧಿತ ಸಿಎಂ ಕೇಜ್ರಿವಾಲ್ ಭೇಟಿ ರದ್ದಾದ ಹಿನ್ನೆಲೆಯಲ್ಲಿ ಆಪ್ ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದೆ. ಈ ಕುರಿತು ಮಾತನಾಡಿರುವ ಆಪ್ ನಾಯಕ ಸಂಜಯ್ ಸಿಂಗ್, ಜೈಲು ಅಧಿಕಾರಿಗಳ ಮೇಲೆ ಒತ್ತಡವಿದ್ದು, ಕೇಜ್ರಿವಾಲ್ ಭೇಟಿಗೆ ಮೊದಲು ಅನುಮತಿ ನೀಡಿ, ಬಳಿಕ ರದ್ದುಪಡಿಸಲಾಗಿದೆ ಎಂದು ಆರೋಪಿಸಿದರು.