Advertisement
ಆದರೆ ಇದನ್ನು ಕೇಜ್ರಿವಾಲ್ ತಿರಸ್ಕರಿಸಿದ್ದಾರೆ. ಚುನಾವಣಾ ಆಯೋಗ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ಗೋವಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್, ಕಾಂಗ್ರೆಸ್ ಮತ್ತು ಬಿಜೆಪಿ ಮಂದಿ ನಿಮಗೆ ಲಂಚ ನೀಡಲು ಬರುತ್ತಾರೆ. ಆಗ ನೀವು ಹೊಸ ಕರೆನ್ಸಿಯಲ್ಲಿ ಹಣ ತೆಗೆದುಕೊಳ್ಳಿ. ಹಣದುಬ್ಬರವಿರುವುದರಿಂದ 5000 ರೂ. ಬದಲು 10,000 ರೂ. ತೆಗೆದುಕೊಳ್ಳಿ. ಮತವನ್ನು ಆಮ್ ಆದ್ಮಿ ಪಕ್ಷಕ್ಕೆ ಹಾಕಿ ಎಂದು ಹೇಳಿದ್ದರು.
ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ನಿರತವಾಗಿರುವ ಆಪ್ ರಾಷ್ಟ್ರೀಯ ಸಂಚಾಲಕರೂ ಆಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮಗೆ ನೀಡಿರುವ ಪೊಲೀಸ್ ಭದ್ರತೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗವನ್ನು ಆಗ್ರಹಪಡಿಸಿದ್ದಾರೆ. ರಾಜ್ಯದ ಅನೇಕ ಕಡೆ ಪ್ರವಾಸ ಮಾಡುವ ಸಮಯದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಗಮನಿಸಿದ್ದೇನೆ. ಇದರ ಆವಶ್ಯಕತೆಯಿಲ್ಲ ಎಂಬುದು ನನಗೆ ಮನವರಿಕೆಯಾದ ಹಿನ್ನೆಲೆಯಲ್ಲಿ ಕೂಡಲೆ ಭದ್ರತೆಯನ್ನು ವಾಪಸ್ ಪಡೆಯ ಬೇಕೆಂದು ಅವರು ರಾಜ್ಯದ ಮುಖ್ಯ ಚುನಾವಣಾಧಿ ಕಾರಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
Related Articles
Advertisement