Advertisement

ಫೆ.16ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ; ಪ್ರಧಾನಿ ನರೇಂದ್ರ ಮೋದಿಗೆ ಕೇಜ್ರಿವಾಲ್ ಆಹ್ವಾನ

10:14 AM Feb 15, 2020 | Nagendra Trasi |

ನವದೆಹಲಿ: ಫೆ.16ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅರವಿಂದ್ ಕೇಜ್ರಿವಾಲ್ ಆಹ್ವಾನಿಸಿದ್ದಾರೆ.

Advertisement

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಚಂಡ ಜಯಭಾರಿ ಬಾರಿಸಿದ್ದು, ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಫೆ.16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿಂದೆ ಸಚಿವರಾಗಿದ್ದವರು ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದು, ಅಂದು ಕೇಜ್ರಿವಾಲ್ ಜತೆಗೆ ಎಲ್ಲಾ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.

70 ಸದಸ್ಯಬಲದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನ ಪಡೆದಿದ್ದು, ಒಟ್ಟು 53.57ರಷ್ಟು ಮತಪ್ರಮಾಣ ಹಂಚಿಕೊಂಡಿದೆ. ಬಿಜೆಪಿ 8ಸ್ಥಾನಗಳಲ್ಲಿ ಗೆಲುವು ಸಾಧಿಸಿ ಶೇ.38.51ರಷ್ಟು ಮತಗಳಿಸಿದ್ದರೆ, ಕಾಂಗ್ರೆಸ್ ಪಕ್ಷ ಒಂದೂ ಸ್ಥಾನ ಪಡೆಯದೇ ಶೇ.4.26ರಷ್ಟು ಮತಗಳಿಸಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next